More

    ಅನ್ಯ ಭಾಷೆಗಳ ವ್ಯಾಮೋಹದಿಂದ ಕನ್ನಡ ಕಡೆಗಣನೆ

    ಕುಶಾಲನಗರ: ಪರ ಭಾಷೆಗಳ ವ್ಯಾಮೋಹದಿಂದಾಗಿ ಕನ್ನಡ ಭಾಷೆ ಕಡೆಗಣನೆಯಾಗುತ್ತಿದೆ ಎಂದು ತಾಲೂಕಿನ ಪೊಲೀಸ್ ಉಪ ಅಧೀಕ್ಷಕ ಆರ್.ವಿ. ಗಂಗಾಧರಪ್ಪ ವಿಷಾದಿಸಿದರು.


    ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕುಶಾಲನಗರದ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕನ್ನಡ, ಕನ್ನಡ ನೆಲದಲ್ಲಿ ಬದುಕುತ್ತಿರುವ ಜನರ ಮೊದಲ ಅಸ್ಮಿತೆಯಾಗಬೇಕು. ಇತರ ಭಾಷೆಗಳ ಬಳಕೆ ಅಗತ್ಯಕ್ಕೆ ಮಾತ್ರ ಇರಬೇಕು. ಪ್ರತಿಯೊಬ್ಬರೂ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗುವ ಮೂಲಕ ಕನ್ನಡ ಭಾಷೆ, ನೆಲ-ಜಲದ ಬಗ್ಗೆ ಅಭಿಮಾನ ಹೊಂದಬೇಕು ಎಂದರು.


    ಸಾಹಿತಿ ಬಿ.ಆರ್.ನಾರಾಯಣ ಮಾತನಾಡಿ, ಕನ್ನಡ ಭಾಷೆ ಬಗೆಗಿನ ಪ್ರೀತಿ ಹಾಗೂ ಕಾಳಜಿ ಎಷ್ಟೇ ಇದ್ದರೂ ಅದರ ಬಗೆಗಿನ ಬದ್ಧತೆ ಮತ್ತು ಬಾಧ್ಯತೆಗಳು ಪ್ರಕಟವಾಗಲು ಸದಸ್ಯತ್ವ ಅಗತ್ಯ. ಕನ್ನಡದ ಸೌಂದರ್ಯ ಮಹತ್ತು ಬೃಹತ್ತುಗಳು ಇತರ ಭಾಷೆಗಳೊಂದಿಗೆ ಹೋಲಿಸಿದರೆ ಹಿರಿದು. ಇದನ್ನರಿತು ಉಳಿಸಿ ಬೆಳೆಸುವ ಕಾರ್ಯ ವಿದ್ಯಾರ್ಥಿಗಳಿಂದಾಬೇಕು ಎಂದರು


    ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಕೆ.ಎಸ್.ಮೂರ್ತಿ ಮಾತನಾಡಿ, ಮಾಜಿ ಯೋಧರು, ಅಂಗವಿಕಲರಿಗೆ ಉಚಿತ ಸದಸ್ಯತ್ವ ನೀಡಲಾಗುತ್ತಿದೆ. ತಾಲೂಕಿನಲ್ಲಿ ಕನಿಷ್ಟ 10 ಸಾವಿರ ಸದಸ್ಯತ್ವದ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.


    ಕನ್ನಡ ಭಾರತಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ರುದ್ರಾಚಾರಿ, ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಪುರುಷೋತ್ತಮ, ಕನ್ನಡ ಪ್ರಾಧ್ಯಾಪಕ ಡಾ.ನಾಗೇಂದ್ರಸ್ವಾಮಿ, ಕಾಲೇಜಿನ ಎನ್‌ಎಸ್‌ಎಸ್ ಘಟಕದ ಕಾರ್ಯಕ್ರಮ ಅಧಿಕಾರಿ ಮಂಜುನಾಥ, ಸಾಹಿತ್ಯ ಪರಿಷತ್ತಿನ ತಾಲೂಕು ಕಾರ್ಯದರ್ಶಿ ಎಸ್.ನಾಗರಾಜು, ಕೋಶಾಧಿಕಾರಿ ಕೆ.ವಿ.ಉಮೇಶ್, ತಾಲೂಕು ಮಾಜಿ ಅಧ್ಯಕ್ಷ ಟಿ.ಜಿ.ಪ್ರೇಮಕುಮಾರ್, ಹೆಬ್ಬಾಲೆ ಹೋಬಳಿ ಘಟಕದ ಅಧ್ಯಕ್ಷ ಎಂ.ಎನ್.ಮೂರ್ತಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts