More

    ಅಪಾಯದಂಚಿನಲ್ಲಿರುವ ಮನೆ ಗುರುತಿಸಿ

    ಗದಗ: ಮಳೆಗಾಲ ಆರಂಭವಾಗಿರುವುದರಿಂದ ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದ ಮನೆಗಳಿಗೆ ನೀರು ನುಗ್ಗದಂತೆ ನೋಡಿಕೊಳ್ಳಬೇಕು. ತಗ್ಗು ಪ್ರದೇಶದಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲು ಕ್ರಮಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸುಂದರೇಶ ಬಾಬು ಹೇಳಿದರು.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.

    ಅತಿವೃಷ್ಟಿಯಿಂದ ಹಾನಿಗೆ ಒಳಗಾಗಬಹುದಾದಂತಹ ಮನೆಗಳನ್ನು ಈಗಾಲೇ ಗುರುತಿಸಿ ಮುಂದೆ ಸಂಭವಿಸಬಹುದಾದ ಹಾನಿಗಳ

    ಬಗ್ಗೆ ತಿಳಿವಳಿಕೆ ನೀಡಬೇಕು. ಅಂತಹ ಮನೆಗಳಲ್ಲಿ ವಾಸಿಸುವವರನ್ನು ಸ್ಥಳಾಂತರಿಸಿ ಜೀವ ಹಾನಿ ಹಾಗೂ ಆಸ್ತಿ ಹಾನಿಯಾಗದಂತೆ ತಡೆಯಲು ಸಂಬಂಧಿಸಿದ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದರು.

    ಕೆರೆಗಳ ಸರ್ವೆ ಕಾರ್ಯ, ಗಡಿ ಗುರುತಿಸುವಿಕೆ, ಅತಿಕ್ರಮಣ ತೆರವುಗೊಳಿಸುವುದು ಹಾಗೂ ಕೆರೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವ ಬಗ್ಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ. ಅಭಿವೃದ್ಧಿಗೆ ಸಂಬಂಧಿಸಿದಂತೆ ಸಾರ್ವಜನಿಕ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಸಸಿಗಳನ್ನು ನೆಡುವ ಕಾರ್ಯ ಕೈಗೊಳ್ಳಬೇಕು ಎಂದರು.

    ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ಆಶ್ರಯ ಯೋಜನೆಯಡಿ ಈಗಾಗಲೇ ಜಮೀನುಗಳನ್ನು ಗುರುತಿಸಲಾಗಿದ್ದು, ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಕೂಡಲೆ ಅರ್ಹ ಫಲಾನುಭವಿಗಳನ್ನು ಗುರುತಿಸಿ ಹಕ್ಕು ಪತ್ರ ವಿತರಣೆ ಕಾರ್ಯಕ್ಕೆ ವಿಶೇಷ ಆಸಕ್ತಿ ವಹಿಸಬೇಕು ಎಂದರು.

    ಘನತ್ಯಾಜ್ಯ ವಸ್ತು ವಿಲೇವಾರಿ ಘಟಕದಲ್ಲಿ ನಿಗದಿಪಡಿಸಿದ ಕಾಮಗಾರಿಗಳ ಸ್ಥಳವನ್ನು ಹೊರತುಪಡಿಸಿ ಬಾಕಿ ಇರುವ ಸ್ಥಳದಲ್ಲಿ ಹಾಗೂ ವಿಲೇವಾರಿ ಘಟಕದ ಸುತ್ತಲೂ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಸಸಿಗಳನ್ನು ನೆಡಬೇಕು ಎಂದರು.

    ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎಚ್.ಎನ್. ಗುರುಪ್ರಸಾದ, ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತ ರಮೇಶ ಜಾಧವ, ಜಿಲ್ಲಾ ನಗರಾಭಿವೃದ್ಧಿ ಕೋಶದ ಇಂಜಿನಿಯರರು ಮತ್ತು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಸಭೆಯಲ್ಲಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts