More

    ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ

    ಕಲಬುರಗಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿಗೆ ಜಿಲ್ಲಾ 2ನೇ ಹೆಚ್ಚುವರಿ ಸತ್ರ ಮತ್ತು ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.
    ಸಿಂದಗಿ ತಾಲೂಕಿನ ಯಂಕಂಚಿ ಗ್ರಾಮದ ಸದಾನಂದ ಪತ್ತಾರ್ ಶಿಕ್ಷೆಗೆ ಗುರಿಯಾದವ. ಜೇವರ್ಗಿ ತಾಲೂಕಿನ ಸೈದಾಪುರ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಿದ ಮನೆಯ ಬಡಿಗತನದ ಕೆಲಸಕ್ಕೆ ಬಂದಿದ್ದ ವೇಳೆ ಏ.25, 2019ರಂದು ಸಂಬಂಧಿಕರ ಮನೆಯಲ್ಲಿದ್ದ 14 ವರ್ಷದ ಅಪ್ರಾಪ್ತೆಗೆ ಯಾರಿಗೂ ಹೇಳಬೇಡ ಎಂದು ಬೆದರಿಕೆ ಹಾಕಿ ಅತ್ಯಾಚಾರ ನಡೆಸಿದ್ದ. ಅಲ್ಲದೆ ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ವಿಜಯಪುರ ಜಿಲ್ಲೆ ತಾಳಿಕೋಟೆ ಬಳಿ ತಮದೊಡ್ಡಿಗೆ ಕರೆದೊಯ್ದು ಅಲ್ಲೂ ಲೈಂಗಿಕ ದೌರ್ಜನ್ಯ ನಡೆಸಿದ್ದ ಎಂದು ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಅಡಿ ಪ್ರಕರಣ ದಾಖಲಾಗಿತ್ತು.
    ಸಿಪಿಐ ಡಿ.ಬಿ.ಪಾಟೀಲ್ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. 2ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯ ನ್ಯಾಯಾಧೀಶ ಎಸ್.ಗೋಪಾಲಪ್ಪ ಅವರು ಪ್ರಕರಣದ ವಿಚಾರಣೆ ನಡೆಸಿ ಆರೋಪ ಸಾಬೀತಾಗಿದ್ದರಿಂದ ವಿವಿಧ ಕಲಂಗಳಡಿ ಜೀವಾವಧಿ ಶಿಕ್ಷೆ ಜತೆಗೆ 10 ವರ್ಷ ಜೈಲು ಮತ್ತು 1 ಲಕ್ಷ ರೂ. ದಂಡ ವಿಧಿಸಿದ್ದಾರೆ. ಸರ್ಕಾರದ ಪರ ಅಭಿಯೋಜಕ ಎಲ್.ವಿ. ಚಟ್ನಾಳಕರ್ ವಾದಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts