More

    ಅಬಕಾರಿ ಪೊಲೀಸರಿಂದ ಅಕ್ರಮ ಗಾಂಜಾ ವಶ

    ವಿಜಯಪುರ: ವಿಜಯಪುರ ಅಬಕಾರಿ ಪೊಲೀಸರು ಹಾಗೂ ಸಿಬ್ಬಂದಿ ಕಾರ್ಯಾಚರಣೆ‌ ನಡೆಸಿ 90 ಸಾವಿರ ರೂಪಾಯಿ ಮೌಲ್ಯದ ಮೂರು ಕೆಜಿ ಅಕ್ರಮ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ವಿಜಯಪುರ ಜಿಲ್ಲೆ ಟಕ್ಕಳಕಿ ಗ್ರಾಮದಿಂದ ಜಾಲಗೇರಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಗಾಂಜಾ ಸಾಗಿಸುತ್ತಿದ್ದ ದ್ವಿಚಕ್ರ ವಾಹನ ಹಾಗೂ 3 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದು, ಆರೋಪಿ ಪರಾರಿಯಾಗಿದ್ದಾನೆ. ಅಬಕಾರಿ ಜಂಟಿ ಆಯುಕ್ತ ಮಂಜುನಾಥ ಹಾಗೂ ಉಪ ಆಯುಕ್ತ ಅರುಣಕುಮಾರ ಮಾರ್ಗದರ್ಶನದಲ್ಲಿ ವಿಜಯಪುರ ಅಬಕಾರಿ ಇನ್ಸಪೆಕ್ಟರ್ ಮಹಾದೇವ ಪೂಜಾರಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಎನ್ ಡಿ ಪಿ ಎಸ್ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts