More

    ಅಭಿಮಾನವಿದ್ದರೆ ಶಾಲೆಗಳ ಅಭಿವೃದ್ಧಿ ಸಾಧ್ಯ

    ಶಿರಸಿ: ಕಲಿತ ಶಾಲೆಯ ಬಗ್ಗೆ ಹೆಚ್ಚಿನ ಅಭಿಮಾನವಿದ್ದರೆ ಮಾತ್ರ ಆ ಊರಿನ ಶಾಲೆಗಳು ಕೂಡ ದಾನಿಗಳ ಸಹಾಯದಿಂದ ಅಭಿವೃದ್ಧಿ ಹೊಂದುತ್ತದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

    ತಾಲೂಕಿನ ಬಂಡಲದ ಸರ್ಕಾರಿ ಪ್ರಾಥಮಿಕ ಶಾಲೆಯ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ನಿವೃತ್ತ ಹಾಗೂ ಹಾಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು, ದಾನಿಗಳು, ಶಾಲಾ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಸಾಧನೆ ಮೆರೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವಿದೆ ಎನ್ನುವುದಕ್ಕೆ ಬಂಡಲದ ಶಾಲೆ ಉತ್ತಮ ಉದಾಹರಣೆಯಾಗಿದೆ. ಇಲ್ಲಿನ ಜನರು ಕೂಡ ಶಿಕ್ಷಣವಂತರು, ಶಿಕ್ಷಣ ಪ್ರೇಮಿಗಳೂ ಆಗಿರುವುದರಿಂದ ಈ ಶಾಲೆಯು ಶೈಕ್ಷಣಿಕವಾಗಿ ಇನ್ನಷ್ಟು ಗುಣಮಟ್ಟ ಸಾಧಿಸಲು ಸಾಧ್ಯವಾಗಿದೆ ಎಂದರು.

    ಬಂಡಲದ ಪ್ರಾರ್ಥಮಿಕ ಹಾಗೂ ಪ್ರೌಢಶಾಲೆ ಕೆಲವೇ ವರ್ಷಗಳಲ್ಲಿ ತ್ರಿವಿಕ್ರಮ ಸಾಧನೆ ಮಾಡಿದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಶಾಲೆಯ ಅಭಿವೃದ್ಧಿಗೆ ಬೇಕಾದ ಎಲ್ಲಾ ಸಹಾಯ ಸಹಕಾರ ನೀಡಲು ಬದ್ಧನಾಗಿದ್ದೇನೆ ಎಂದು ಹೇಳಿದರು.

    ಎನ್​ಡಬ್ಲು್ಯಕೆಆರ್​ಟಿಸಿ ಅಧ್ಯಕ್ಷ ವಿ.ಎಸ್. ಪಾಟೀಲ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಸಂತೋಷ ಗೌಡ ಪ್ರಾಸ್ತಾವಿಕ ಮಾತನಾಡಿದರು. ವೇದಿಕೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಯಶ್ರೀ ಮೊಗೇರ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಶ್ರೀಲತಾ ಕಾಳೆರಮನೆ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಜಿ.ಎನ್. ಹೆಗಡೆ ಮುರೇಗಾರ, ಉಷಾ ಹೆಗಡೆ, ಬಸವರಾಜ ದೊಡ್ಮನಿ, ರೂಪಾ ನಾಯ್ಕ, ಪ್ರಭಾವತಿ ಗೌಡ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts