More

    ಅಭಿವೃದ್ಧಿಗೆ ಸರ್ಕಾರಿ ನೌಕರರ ಸಹಕಾರ ಸ್ಮರಣೀಯ

    ಬಸವನಬಾಗೇವಾಡಿ: ಕ್ರೀಡೆಯಿಂದ ದೈಹಿಕ, ಮಾನಸಿಕ ಆರೋಗ್ಯ ಸುಸ್ಥಿತಿಯಲ್ಲಿರುತ್ತದೆ. ಪ್ರತಿಯೊಬ್ಬರೂ ತಮ್ಮ ದೈನಂದಿನ ಕೆಲಸದೊಂದಿಗೆ ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸಬೇಕು ಎಂದು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕಿನ ನಿರ್ದೇಶಕಿ ಸಂಯುಕ್ತ ಪಾಟೀಲ ಹೇಳಿದರು.

    ಪಟ್ಟಣದ ವಿಜಯಪುರ ರಸ್ತೆಯ ಬಸವೇಶ್ವರ ಪ.ಪೂ ಕಾಲೇಜು ಆವರಣದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಕಂದಾಯ ಇಲಾಖೆಯಿಂದ ಶನಿವಾರ ಆಯೋಜಿಸಿದ್ದ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

    ಸರ್ಕಾರಿ ನೌಕರರು ತಮ್ಮ ಒತ್ತಡದ ಕರ್ತವ್ಯದ ಜತೆಗೆ ಇಂಥ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅವಶ್ಯವಾಗಿದೆ. ಬಸವನಬಾಗೇವಾಡಿ ಮತಕ್ಷೇತ್ರ ಸಾಕಷ್ಟು ಅಭಿವೃದ್ಧಿ ಹೊಂದುವ ಮೂಲಕ ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವಾಗಿದೆ. ನಮ್ಮ ತಂದೆಯವರಾದ ಸಚಿವ ಶಿವಾನಂದ ಪಾಟೀಲ ಅವರೊಂದಿಗೆ ಕ್ಷೇತ್ರದ ಎಲ್ಲ ಅಧಿಕಾರಿಗಳು ಹಾಗೂ ನೌಕರರು ಸಹಕಾರ ನೀಡುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಿದ್ದು ಸ್ಮರಣೀಯ ಎಂದರು.
    ತಹಸೀಲ್ದಾರ್ ಯಮನಪ್ಪ ಸೋಮನಕಟ್ಟಿ ಮಾತನಾಡಿ, ಕ್ರೀಡಾಕೂಟದಲ್ಲಿ ಸೋಲು ಗೆಲುವು ಮುಖ್ಯವಲ್ಲ. ಭಾಗವಹಿಸುವಿಕೆ ಮುಖ್ಯವಾಗಿರುತ್ತದೆ. ವಿವಿಧ ಇಲಾಖೆ ನೌಕರರು ಒಟ್ಟಾಗಿ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಸ್ನೇಹ ಬಂಧುತ್ವಕ್ಕೆ ಪೂರಕವಾಗುತ್ತದೆ ಎಂದು ಹೇಳಿದರು.

    ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ, ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಶಿವಾನಂದ ಮಂಗಾನವರ, ಭೂ ಮಾಪನಾ ಅಧಿಕಾರಿ ಬಿ.ಬಿ.ವಗ್ಗನ್ನವರ, ಮುಖ್ಯಾಧಿಕಾರಿ ರುದ್ರೇಶ ಚಿತ್ತರಗಿ, ರಮೇಶ ಪೂಜಾರಿ, ಅಜೀಜ ಬಳಬಟ್ಟಿ, ಎಚ್.ಎಸ್.ಗುರಡ್ಡಿ, ಸಾಯಬಲಾಲ್ ದಳವಾಯಿ, ರಾಹುಲ ಪಾಟೀಲ, ಶ್ರೀಶೈಲ ಮಾಣಿ, ಪ್ರಶಾಂತ ಪಾಟೀಲ ಇತರರಿದ್ದರು.

    ಪಂದ್ಯಾವಳಿಯಲ್ಲಿ ಕಂದಾಯ ಇಲಾಖೆ, ಸಮಾಜಕಲ್ಯಾಣ, ಅಗ್ನಿಶಾಮಕ, ಪೊಲೀಸ್ ಇಲಾಖೆ ಹಾಗೂ ಕಾರ್ಯನಿರತ ಪತ್ರಕರ್ತ ಸಂಘ, ಶಿಕ್ಷಣ ಇಲಾಖೆ, ಆರೋಗ್ಯ, ನ್ಯಾಯಾಂಗ ಇಲಾಖೆಯ ತಂಡಗಳು ಭಾಗವಹಿಸಿದ್ದವು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts