More

    ಅಭಿವೃದ್ಧಿಯಲ್ಲಿ ರಾಜ್ಯ ಹಿಂದೆ ಹೋಗಿದೆ

    ಬಳ್ಳಾರಿ : ರಾಜ್ಯ ಸರ್ಕಾರ ಕಳೆದ ಹತ್ತು ತಿಂಗಳಲ್ಲಿ ಅಭಿವೃದ್ಧಿಯಲ್ಲಿ ಹತ್ತು ವರ್ಷದಷ್ಟು ಹಿಂದೆ ಹೋಗಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.
    ಕುರುಗೋಡಿನ ರಾಜರೆಡ್ಡಿ ಕಲ್ಯಾಣ ಮಂಟಪದಲ್ಲಿ ಗುರುವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಬೆಂಗಳೂರಿನಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣ, ನೇಹಾ ಕೊಲೆಯಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗಟ್ಟಿದೆ. ರಾಜ್ಯದಲ್ಲಿ ಭೀಕರ ಬರಗಾಲ ಅವರಿಸಿದೆ, ಸಕಾಲಕ್ಕೆ ಜನರಿಗೆ ಕುಡಿಯುವ ನೀರಿನ ಪೂರೈಕೆ ಮಾಡಲು ಯೋಗ್ಯತೆ ಇಲ್ಲ. ಕಾಂಗ್ರೆಸ್ ಸರ್ಕಾರ ಮುಸ್ಲಿಂ ರ ಒಲೈಕೆ ಮಾಡಲು ಹೊರಟಿದೆ. ಆದ್ದರಿಂದ, ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಮುಸ್ಲಿಂರನ್ನು ಸೇರಿಸಲು ಹೊರಟಿದೆ ಎಂದು ಕಿಡಿಕಾರಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಜೀನ್ಸ್ ಅಪೆರಲ್ ಪಾರ್ಕ್ ನಿರ್ಮಾಣ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಅಧಿಕಾರಕ್ಕೂ ಬಂದು ವರ್ಷ ಕಳೆದರೂ ಜೀನ್ಸ್ ಪಾರ್ಕ ಗೆ ಒಂದು ರೂ. ಅನುದಾನ ನೀಡಿಲ್ಲ. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ದಿವಾಳಿಯಾಗಿದೆ , ಅಭಿವೃದ್ಧಿ ಕಾಮಗಾರಿಗಳು ಸ್ಥಗಿತವಾಗಿವೆ ಎಂದು ವಾಗ್ದಳಿ ನಡೆಸಿದರು. ಮುಂದಿನ ದಿನಗಳಲ್ಲ ಗಂಗಾವತಿ ಕಂಪ್ಲಿ ರೈಲು ಮಾರ್ಗವಾಗಿ ಕಂಪ್ಲಿ, ಕುರುಗೋಡು ಮೂಲಕ ರೈಲು ಸಂಪರ್ಕ ಮಾಡಲಾಗುವುದು ಎಂದು ಆಶ್ವಾಸನೆ ನೀಡಿದರು. ವಿದೇಶ ಹಾಗೂ ಪಾಕಿಸ್ತಾನ ಸಹ ಮೋದಿರವರನ್ನು ಪ್ರಧಾನಿಯಾಗಬೇಕು ಎಂದು ಹೇಳುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿರವರು ಒಂದು ದಿನ ವಿಶ್ರಾಂತಿ ಪಡೆಯದೆ ದೇಶದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳನ್ನು ವಿವರಿಸಿದರು. ಬಳ್ಳಾರಿಯ ಲೋಕಸಭಾ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts