More

    ಅಭಿವೃದ್ಧಿ ಕಡೆಗಣಿಸಿದ ಹಿಂದಿನ ಶಾಸಕರು

    ಯಾದಗಿರಿ: ಹಿಂದಿನ ಕಾಂಗ್ರೆಸ್ ಅವ ವೇಳೆ ಕ್ಷೇತ್ರದಲ್ಲಿ ಹೇಳಿಕೊಳ್ಳುವಂಥ ಅಭಿವೃದ್ಧಿ ಕಾರ್ಯ ನಡೆದಿಲ್ಲ ಎಂದು ಶಾಸಕ ವೆಂಕಟರಡ್ಡಿ ಮುದ್ನಾಳ್ ಆರೋಪಿಸಿದರು.

    ಸೋಮವಾರ ಕ್ಷೇತ್ರದ ಇಬ್ರಾಹಿಂಪುರ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ 74 ಲಕ್ಷ ರೂ. ವೆಚ್ಚದಲ್ಲಿ ತಾಂಡಾಕ್ಕೆ ಕೂಡು ರಸ್ತೆ ನಿಮರ್ಾಣಕ್ಕೆ ಅಡಿಗಲ್ಲು, ಸಮಾಜ ಕಲ್ಯಾಣ ಇಲಾಖೆಯಿಂದ 20 ಲಕ್ಷ ರೂ. ವೆಚ್ಚದಲ್ಲಿ ಡಾ. ಬಾಬು ಜಗಜೀವನರಾಮ್ ಭವನ, ಗ್ರಾಪಂನಿಂದ 15 ಲಕ್ಷ ರೂ. ವೆಚ್ಚದಲ್ಲಿ ನಿಮರ್ಿಸಿರುವ ಸ್ವಚ್ಚ ಸಂಕೀರ್ಣ ಕಟ್ಟಡ, ಶುದ್ಧ ಕುಡಿಯುವ ನೀರಿನ ಘಟಕ ಮತ್ತು ಸಕರ್ಾರಿ ಶಾಲೆಯಲ್ಲಿ ಡಿಜಿಟಲ್ ಗ್ರಂಥಾಲಯ, ಶಾಲಾ ಕೋಣೆಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

    ಹಿಂದಿನ ಶಾಸಕರ ಆಡಳಿತದಲ್ಲಿ ಯಾದಗಿರಿ ಕ್ಷೇತ್ರ ಅಭಿವೃದ್ಧಿಯಿಂದ ಸಂಪೂರ್ಣ ವಂಚಿತಗೊಂಡಿತ್ತು. 10 ವರ್ಷಗಳ ಅವಯಲ್ಲಿ ಅಭಿವೃದ್ಧಿಗೆ ವೇಗ ಸಿಕ್ಕಿರಲಿಲ್ಲ. ಆದರೆ ನಾನು ಶಾಸಕನಾಗಿ 5 ವರ್ಷಗಳಲ್ಲಿ ಗ್ರಾಮೀಣ ಭಾಗದಲ್ಲಿ ಮೂಲಸೌಕರ್ಯ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ ಹೆಚ್ಚಿನ ಒತ್ತು ನೀಡಿದ್ದೇನೆ. ನನ್ನ ಸುದೈವಕ್ಕೆ ರಾಜ್ಯದಲ್ಲಿ ನಮ್ಮ ಪಕ್ಷ ಅಕಾರಕ್ಕೆ ಬಂದ ನಂತರ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅನುದಾನ ಸಹ ಸಿಕ್ಕಿದೆ ಎಂದರು.

    ಗ್ರಾಪಂ ವ್ಯಾಪ್ತಿಯಲ್ಲಿನ ಹಳ್ಳಿಗಳಲ್ಲಿ 8 ಕೋಟಿ ರೂ.ಅಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ, ಅಲ್ಲದೇ ಎಲ್ಲರ ಆರಾಧ್ಯ ದೈವ ಅಬ್ದುಲ್ ಬಾಷಾ ಕೆರೆಯನ್ನು 50 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಶೀಘ್ರವೇ ಕಾಮಗಾರಿಗೆ ಟೆಂಡರ್ ಕರೆಯಲಾಗುವುದು ಎಂದು ತಿಳಿಸಿದರು.

    ಮುದ್ನಾಳ್ ಮನೆತನದೊಂದಿಗೆ ಈ ಭಾಗದ ಜನರು ಮೊದಲಿನಿಂದಲೂ ಅವಿನಾಭಾವ ಸಂಬಂಧ ಮುಂದುವರೆಸಿಕೊಂಡು ಬಂದಿದ್ದಾರೆ, ಇನ್ನೂ ಆಗಬೇಕಾಗಿರುವ ಕೆಲಸಗಳು ಸಾಕಷ್ಟಿವೆ. ವಿವಿಧ ಇಲಾಖೆಗಳಿಂದ ಅನುದಾನ ತರುವ ಮೂಲಕ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts