More

    ಅಭಿವೃದ್ಧಿ ಕೆಲಸಗಳಿಗೆ ನಮ್ಮ ಅಭ್ಯಂತರವಿಲ್ಲ

     ಪಾಂಡವಪುರ: ಶಾಸಕ ಸಿ.ಎಸ್. ಪುಟ್ಟರಾಜು ಅವರು ಪರಿಸರದ ವಿರುದ್ಧವಾಗಿ ನಡೆದುಕೊಳ್ಳುವುದನ್ನು ಬಿಟ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದರೆ ನಮ್ಮ ಅಭ್ಯಂತರವಿಲ್ಲ ಎಂದು ರೈತ ನಾಯಕಿ ಸುನೀತಾ ಪುಟ್ಟಣ್ಣಯ್ಯ ಹೇಳಿದರು.

    ಮೂರು ದಿನಗಳಿಂದ ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ತೊಣ್ಣೂರು ಕೆರೆ ಕೋಡಿ ಬಿದ್ದು ರೈತರು ಮತ್ತು ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಮಳೆ ಭಾದಿತ ಗ್ರಾಮಗಳಿಗೆ ಭಾನುವಾರ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿ ಮಾತನಾಡಿದರು. ತೊಣ್ಣೂರು ಕೆರೆ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಕೆರೆ ಏರಿಯನ್ನು ಕೊರೆದು ನೀರಿನ ಒತ್ತಡ ಕಡಿಮೆ ಮಾಡಲು ಮುಂದಾಗಿದ್ದ ಆಧಿಕಾರಿಗಳನ್ನು ಸ್ಥಳೀಯ ರೈತರು ತಡೆದಿದ್ದಾರೆ. ಶಾಸಕ ಸಿ.ಎಸ್. ಪುಟ್ಟರಾಜು ಅವರೇ ಇಲ್ಲಿಗೆ ಅಧಿಕಾರಿಗಳನ್ನು ಕಳುಹಿಸಿದ್ದಾರೆ ಎಂಬ ಮಾಹಿತಿ ಇದೆ. ಶಾಸಕರು ಗ್ರಾಮಗಳನ್ನು ಅಭಿವೃದ್ಧಿ ಮಾಡಲಿ, ಅದಕ್ಕೆ ನಮ್ಮ ತಕರಾರು ಇಲ್ಲ. ಈ ರೀತಿ ಅವೈಜ್ಞಾನಿಕ ನಿರ್ಧಾರಗಳನ್ನು ತೆಗೆದುಕೊಂಡು ಐತಿಹಾಸಿಕ ಕೆರೆಗೆ ಧಕ್ಕೆ ತರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.

    ಐತಿಹಾಸಿಕ ಕೆರೆಯನ್ನು ಒಡೆಯಬಾರದು. ಒಂದು ವೇಳೆ ಕೆರೆ ಒಡೆದು ನಾಲ್ಕೈದು ಹಳ್ಳಿಗಳು ಮುಳುಗಡೆಯಾದರೆ ಅದಕ್ಕೆಲ್ಲ ಯಾರೂ ಹೊಣೆಗಾರರು. ಮಳೆಯಿಂದ ಸುತ್ತಮುತ್ತಲಿನ ಗ್ರಾಮಗಳಿಗೆ ತೊಂದರೆಯಾಗಿದೆ. ಆದರೂ ಯಾವೊಬ್ಬ ಅಧಿಕಾರಿಯೂ ಬಂದು ನೋಡಿಲ್ಲ. ಕುಂಭಮೇಳ ಮಾಡೋದು ಇದ್ದೇ ಇರುತ್ತದೆ. ಈ ಭಾಗದಲ್ಲಿ ಸಾಕಷ್ಟು ತೊಂದರೆಯಾಗಿರುವ ಕಾರಣ ತಕ್ಷಣ ಗಂಜಿ ಕೇಂದ್ರ ತೆರೆದು ಸಂತ್ರಸ್ತರ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದರು.

    ರೈತಸಂಘದ ಜಿಲ್ಲಾಧ್ಯಕ್ಷ ಎ.ಎಲ್. ಕೆಂಪೂಗೌಡ, ತಾಲೂಕು ಅಧ್ಯಕ್ಷ ಚಿಕ್ಕಾಡೆ ಹರೀಶ್, ಮುಖಂಡರಾದ ಎಣ್ಣೆಹೊಳೆಕೊಪ್ಪಲು ವೈ.ಪಿ. ಮಂಜು, ವೈ.ಜಿ. ರಘು ಇತರರು ಇದ್ದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts