More

    ಅಮುಲ್ ರಾಜ್ಯ ಪ್ರವೇಶಕ್ಕೆ ವಿರೋಧ

    ಚಿತ್ರದುರ್ಗ: ರಾಜ್ಯದಲ್ಲಿ ಅಮುಲ್ ಹಾಲು ಮತ್ತು ಅದರ ಉತ್ಪನ್ನಗಳನ್ನು ಮಾರಾಟಕ್ಕೆ ಅವಕಾಶ ಮಾಡಿಕೊಟ್ಟಿರುವ ರಾಜ್ಯ, ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ರೈತಸಂಘದ ಕಾರ್ಯಕರ್ತರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿ, ಡಿಸಿಗೆ ಮನವಿ ಸಲ್ಲಿಸಿದರು.

    ಸಂಘದ ಜಿಲ್ಲಾಧ್ಯಕ್ಷ ಬಸ್ತಿಹಳ್ಳಿ ಜಿ.ಸುರೇಶ್‌ಬಾಬು ಮಾತನಾಡಿ, ರಾಜ್ಯದಲ್ಲಿ ಗುಜರಾತ್ ಮೂಲದ ಅಮುಲ್ ಹಾಲು ಮತ್ತು ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಮುಂದಾಗಿರುವ ಸರ್ಕಾರದ ಕ್ರಮ ಕನ್ನಡ ನಾಡಿನ ರೈತರ ಬದುಕನ್ನು ಸರ್ವನಾಶ ಮಾಡುವಂತದ್ದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ನಿರ್ಧಾರದಿಂದ

    ಹಿಂದೆ ಸರಿಯದಿದ್ದರೆ ಉಗ್ರ ಹೋರಾಟ ಅನಿವಾರ‌್ಯವಾಗಲಿದೆ ಎಂದು ಎಚ್ಚರಿದರು. ಸರ್ವೋದಯ ಕರ್ನಾಟಕದ ಜಿಲ್ಲಾಧ್ಯಕ್ಷ ಜೆ.ಯಾದವರೆಡ್ಡಿ ಮಾತನಾಡಿ, ರಾಜ್ಯದಲ್ಲಿ ಪ್ರತ್ಯೇಕ ಹಾಗೂ ಪರೋಕ್ಷವಾಗಿ ಹೈನುಗಾರಿಕೆಯನ್ನು ನೆಚ್ಚಿಕೊಂಡಿರುವ 75 ಲಕ್ಷ ಮಂದಿ ರಾಜ್ಯದಲ್ಲಿ ಬೀದಿಗೆ ಬೀಳುವ ಅಪಾಯವಿದೆ. ಈ ನಿಟ್ಟಿನಲ್ಲಿ ರಾಜ್ಯದ ರೈತರನ್ನು ಎಚ್ಚರಿಸುವ ಕೆಲಸವಾಗಬೇಕಿದೆ. ನಂದಿನಿ ಹಾಲು, ಉತ್ಪನ್ನಗಳು ಉಳಿವು ಅಗತ್ಯ ಎಂದರು.

    ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಸಿ.ಹೊರಕೇರಪ್ಪ, ಉಪಾಧ್ಯಕ್ಷ ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ತಾಲೂಕು ಅಧ್ಯಕ್ಷ ಧನಂಜಯ ಹಂಪಯ್ಯನಮಾಳಿಗೆ, ಬಿ.ಒ.ಶಿವಕುಮಾರ್, ಮೇಟಿಕುರ್ಕೆ ತಿಪ್ಪೇಸ್ವಾಮಿ, ಚೇತನ್‌ಕುಮಾರ್, ಎಂ.ಎಸ್.ಪ್ರಭು, ಎ.ತಿಪ್ಪೇಸ್ವಾಮಿ, ಓಂಕಾರಪ್ಪ, ಕೆ.ಎಂ.ಕಾಂತರಾಜು, ಎಸ್.ತಿಪ್ಪೇಸ್ವಾಮಿ, ಎಸ್.ರೇವಣ್ಣ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts