More

    ಅರಣ್ಯಾಧಿಕಾರಿಗಳಿಗೆ ಬೆಂಕಿ ತಡೆ ಕಾರ್ಯಾಗಾರ

    ಸರಗೂರು: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಅರಣ್ಯ ಮತ್ತು ವನ್ಯಪ್ರಾಣಿ ಸಂಪತ್ತನ್ನು ಬೇಸಿಗೆಯಲ್ಲಿ ಉಂಟಾಗುವ ಕಾಡ್ಗಿಚ್ಚಿನಿಂದ ಸಂರಕ್ಷಿಸುವುದಕ್ಕಾಗಿ ಅನುಸರಿಸಬೇಕಾದ ಮುಂಜಾಗೃತ ಕ್ರಮಗಳ ಬಗ್ಗೆ ಅರಣ್ಯಾಧಿಕಾರಿಗಳಿಗೆ ಅರಣ್ಯ ಬೆಂಕಿ ತಡೆ ಕಾರ್ಯಾಗಾರ ನಡೆಸಲಾಯಿತು.


    ತಾಲೂಕಿನ ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನ ಆವರಣದಲ್ಲಿ ಬಂಡೀಪುರ ಹುಲಿ ಯೋಜನೆ ಅರಣ್ಯ ಸಂರಕ್ಷಣಾ ಧಿಕಾರಿ, ಕ್ಷೇತ್ರ ನಿರ್ದೇಶಕರಾದ ಪಿ.ರಮೇಶ್‌ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಾಗಾರದಲ್ಲಿ ಅರಣ್ಯ ಮತ್ತು ಪ್ರಾಣಿಗಳನ್ನು ಕಾಡ್ಗಿಚ್ಚಿನಿಂದ ರಕ್ಷಿಸಲು ಅನುಸರಿಸಬೇಕಾದ ಮುಂಜಾಗೃತ ಕ್ರಮಗಳು, ಶೂನ್ಯ ಬೆಂಕಿ ಸಾಧಿಸಲು ಅಗತ್ಯ ವಿರುವ ಪೂರ್ವ ಸಿದ್ಧತೆಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಲಾಯಿತು.


    ಅರಣ್ಯ ವಲಯಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿ ರುವ ಪರಿಸರ ಅಭಿವೃದ್ಧಿ ಸಮಿತಿಗಳು ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿ ಕಾಲದಲ್ಲಿ ಅಗ್ನಿ ಅವಘಡಗಳು ಸಂಭವಿಸದ ಹಾಗೆ ಎಚ್ಚರವಹಿಸಿ ಕಾರ್ಯನಿರ್ವಹಿಸಬೇಕು. ಉಪ ವಿಭಾಗಗಳು, ವಲಯಗಳ ನಡುವೆ ಪರಸ್ಪರ ಸಹಕಾರ ಮನೋಭಾವನೆ ಬೆಳೆಸಬೇಕು. ವಾಹನ ಬಂದೂಕು, ನಿಸ್ತಂತು, ಬೆಂಕಿ ಉಪಕರಣಗಳನ್ನು ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡಲು ದಿನದ 24 ಗಂಟೆಯೂ ಕಟ್ಟೆಚ್ಚರ ವಹಿಸಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.


    ಬೆಂಕಿ ರಕ್ಷಣೆ ಸಂಬಂಧ ಸಾರ್ವಜನಿಕರಿಗೆ ಅರಿವು ಮೂಡಿಸಲು ಬೀದಿ ನಾಟಕ ಸೇರಿದಂತೆ ಇನ್ನಿತರ ಅರಿವು ಕಾರ್ಯಕ್ರಮಗಳನ್ನು ನಡೆಸಬೇಕು. ಇದಲ್ಲದೆ ಬೆಂಕಿ ನಿರ್ವಹಣೆ ಯೋಜನೆಗಳನ್ನು ಸೂಕ್ತ ರೀತಿಯಲ್ಲಿ ತಯಾರಿಸಿ, ಅವುಗಳ ರೂಪುರೇಷೆಗಳ ಅನುಸಾರ ಸಿದ್ದತೆಗಳನ್ನು ಕೈಗೊಳ್ಳಲು ಕಾರ್ಯಾಗಾರದಲ್ಲಿ ತೀರ್ಮಾನಿಸಲಾಯಿತು.

    ಕಾರ್ಯಾಗಾರದಲ್ಲಿ ಬಂಡೀಪುರ ಹುಲಿ ಯೋಜನೆ ಅರಣ್ಯ ಸಂರಕ್ಷಣಾಧಿಕಾರಿ, ಕ್ಷೇತ್ರ ನಿರ್ದೇಶಕ ಪಿ.ರಮೇಶ್‌ಕುಮಾರ್, ಎಸಿಎಫ್ ಕೆ.ಪರಮೇಶ್, ಆರ್‌ಎಫ್‌ಒಗಳಾದ ನಾರಾಯಣ್, ನಿವೇದಿತಾ, ಪುಟ್ಟರಾಜು, ಅಮೃತೇಶ್, ಪುನೀತ್‌ಕುಮಾರ್, ಅರುಣ್‌ಕುಮಾರ್, ಸಿಬ್ಬಂದಿ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts