More

    ಅರಣ್ಯ ವಾಸಿಗಳ ಮೇಲಿನ ಕೇಸ್ ಹಿಂಪಡೆಯಿರಿ: ಶಿಡ್ಡಿಹಳ್ಳಿ ರೈತರಿಂದ ಕರಾಳ ದಿನಾಚರಣೆ ಎಚ್ಚರಿಕೆ

    ಸೊರಬ: ಅರಣ್ಯ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ ಸಾಗುವಳಿದಾರರ ಜಮೀನನ್ನು ಸಕ್ರಮಗೊಳಿಸಬೇಕು ಹಾಗೂ ಸಾಗುವಳಿದಾರರ ಮೇಲೆ ದಾಖಲಿಸಿದ ಪ್ರಕರಣವನ್ನು ಹಿಂಪಡೆಯಬೇಕು. ಇಲ್ಲವಾದಲ್ಲಿ ಆ. 15ರಂದು ಕರಾಳ ದಿನ ಆಚರಿಸಲಾಗುವುದು ಎಂದು ಮಲೆನಾಡು ರೈತರ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ತೀ.ನ.ಶ್ರೀನಿವಾಸ್ ಎಚ್ಚರಿಸಿದರು.
    ಶಿಡ್ಡಿಹಳ್ಳಿ ಅರಣ್ಯ ವಾಸಿಗಳ ಮೇಲೆ ದಾಖಲಿಸಿದ ಪ್ರಕರಣ ಹಿಂಪಡೆಯುವಂತೆ ಆಗ್ರಹಿಸಿ ಸೋಮವಾರ ತಾಲೂಕು ಕಚೇರಿ ಮುಂಭಾಗ ಮಲೆನಾಡು ರೈತರ ಹೋರಾಟ ಸಮಿತಿ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು.
    ಕೇಂದ್ರ ಸರ್ಕಾರದ ಅರಣ್ಯ ಹಕ್ಕು ಕಾಯ್ದೆಯಂತೆ ರೈತರು ಅರ್ಜಿ ಸಲ್ಲಿಸಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ರೈತರನ್ನು ಒಕ್ಕಲೆಬ್ಬಿಸಲು ನೋಟಿಸ್ ಜಾರಿ ಮಾಡಿರುವುದು ಖಂಡನೀಯವಾಗಿದೆ. ಕಾಯ್ದೆಯಲ್ಲಿ ಅರಣ್ಯ ಭೂಮಿ ಸಾಗುವಳಿ ಮಾಡಿರುವ ಭೂ ರಹಿತರು, ಬಡವರು, ಪರಿಷ್ಟ ಜಾತಿಯವರಿಗೆ 3 ಎಕರೆ ಭೂಮಿ ಮಂಜೂರು ಮಾಡಬೇಕು ಎಂದಿದೆ. ಪಾರಂಪರಿಕ ಅರಣ್ಯ ವಾಸಿ ಮಾನ್ಯತೆ ಮತ್ತು ಪರಿಶೀಲನಾ ಪ್ರಕ್ರಿಯೆ ಪೂರ್ಣವಾಗುವವರೆಗೆ ಅವರ ಅಧಿಭೋಗದಲ್ಲಿರುವ ಅರಣ್ಯ ಜಮೀನಲ್ಲಿ ಸಾಗುವಳಿ ಮಾಡುತ್ತಿರುವವರನ್ನು ಒಕ್ಕಲೆಬ್ಬಿಸುವಂತಿಲ್ಲ ಎಂದು ಕಾಯ್ದೆಯಲ್ಲಿದೆ. ಆದರೂ ನೋಟಿಸ್ ನೀಡಿರುವುದರಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ ಎಂದರು.
    ಪಟ್ಟಣದ ಖಾಸಗಿ ಬಸ್ ನಿಲ್ದಾಣದ ವೃತ್ತದಿಂದ ತಾಲೂಕು ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ತಹಸೀಲ್ದಾರ್ ಎಚ್.ಎಸ್.ಶೋಭಾಲಕ್ಷ್ಮೀ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts