More

    ಅರಣ್ಯ ಸಂರಕ್ಷಣೆ ನಮ್ಮೆಲ್ಲರ ಹೊಣೆ

    ಬೆಳಗಾವಿ: ಅರಣ್ಯ ಉಳಿಸಿ, ಬೆಳೆಸುವುದರ ಜತೆಗೆ ವನ್ಯಜೀವಿ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು. ನಗರದ ಅರಣ್ಯ ಇಲಾಖೆಯ ಸಭಾಭವನದಲ್ಲಿ ಅರಣ್ಯ ಇಲಾಖೆ ಮತ್ತು ವನ್ಯಜೀವಿ, ಪರಿಸರ ಅಭಿವೃದ್ಧಿ ಸಂಘದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ವನ್ಯಜೀವಿ ದಿನಾಚರಣೆ ಹಾಗೂ ಸಂಘದ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಅರಣ್ಯ ಸಂರಕ್ಷಣೆ ಹೊಣೆ ಅರಣ್ಯ ಇಲಾಖೆಯದ್ದು ಮಾತ್ರವಲ್ಲ. ಅರಣ್ಯ ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆಯೊಂದಿಗೆ ಸಾರ್ವಜನಿಕರು, ಸಂಘ-ಸಂಸ್ಥೆಗಳು ಕೈಜೋಡಿಸಬೇಕು ಎಂದರು.

    ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ವಿಶ್ವಸಂಸ್ಥೆಯು ಮಾ.3ನ್ನು ವಿಶ್ವ ವನ್ಯಜೀವಿ ದಿನ ಎಂದು ಘೋಷಿಸಿದೆ. ಅರಣ್ಯ ಇಲಾಖೆ ಕಾರ್ಯಚಟುವಟಿಕೆ ಯೊಂದಿಗೆ ಕೈಜೋಡಿಸಿರುವ ವನ್ಯಜೀವಿ, ಪರಿಸರ ಅಭಿವೃದ್ಧಿ ಸಂಘದ ಪ್ರಥಮ ವಾರ್ಷಿಕೋತ್ಸವ ಆಚರಿಸುತ್ತಿರುವುದು ಅಭಿನಂದನೀಯ ಎಂದರು.

    ಅಧ್ಯಕ್ಷತೆ ವಹಿಸಿದ್ದ ಅರಣ್ಯ ಇಲಾಖೆ ಬೆಳಗಾವಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯಕುಮಾರ ಸಾಲಿಮಠ ಮಾತನಾಡಿ, ಅರಣ್ಯ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ನಾವೆಲ್ಲರೂ ಅರಣ್ಯವನ್ನು ಉಳಿಸಿ, ಬೆಳೆಸುವ ಕೆಲಸ ಮಾಡಬೇಕಿದೆ ಎಂದು ಹೇಳಿದರು. ವಲಯ ಅರಣ್ಯ ಇಲಾಖೆ ಅಧಿಕಾರಿ ಸುನೀತಾ ನಿಂಬರಗಿ ಮಾತನಾಡಿದರು. ಅರಣ್ಯ ಇಲಾಖೆ ಬೆಳಗಾವಿ ವೃತ್ತದಿಂದ ಮುಖ್ಯಮಂತ್ರಿ ಪದಕಕ್ಕೆ ಶಿಫಾರಸು ಮಾಡಲಾದ ಎಂಟು ಅಧಿಕಾರಿಗಳನ್ನು ಸನ್ಮಾನಿಸಲಾಯಿತು. ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷ ಭಾನು, ಶಿವಾನಂದ ನಾಯಿಕವಾಡಿ, ಶಂಕರ ಕಲ್ಲೋಳಕರ, ವನ್ಯಜೀವಿ ಪರಿಸರ ಅಭಿವೃದ್ಧಿ ಸಂಘದ ಕಾರ್ಯದರ್ಶಿ ಡಾ.ಡಿ.ಎನ್.ಮಿಸಾಳೆ, ಖಜಾಂಚಿ ಜಗದೀಶ ಮಠದ, ಬಸವರಾಜ ಹಟ್ಟಿಗೌಡರ, ಬಸವರಾಜ ಗೌಡಪ್ಪಗೋಳ, ಎಸ್.ಜಿ.ಕಲ್ಯಾಣಿ ಇತರರು ಇದ್ದರು.

    ಸಂಘದ ಅಧ್ಯಕ್ಷ ಸುರೇಶ ಉರಬಿನಹಟ್ಟಿ ಸ್ವಾಗತಿಸಿದರು. ಡಾ. ಡಿ.ಎನ್.ಮಿಸಾಳೆ ನಿರೂಪಿಸಿದರು. ಉಪಾಧ್ಯಕ್ಷ ಶ್ರೀಶೈಲ ಮಠದ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts