More

    ಅರಸು ಆಡಳಿತ ಶೈಲಿ ಮಾದರಿ

    ಬಾಗಲಕೋಟೆ: ಶೋಷಿತ ವರ್ಗದವರನ್ನು ಮುಖ್ಯವಾಹಿನಿಗೆ ತರಬೇಕು ಎನ್ನುವ ಆಶಯ ಹೊಂದಿದ್ದ ದಿ.ದೇವರಾಜ ಅರಸು ತಮ್ಮ ಆಡಳಿತ ಅವಧಿಯಲ್ಲಿ ಮಹತ್ತರ ಕಾರ್ಯಗಳನ್ನು ಮಾಡಿ ಬದಲಾವಣೆ ತಂದರು ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.
    ನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಾಜಿ ಸಿಎಂ ದಿ. ಡಿ.ದೇವರಾಜ ಅರಸು 107 ನೇ ಜನ್ಮ ದಿನಾಚರಣೆ ಜಿಲ್ಲಾ ಮಟ್ಟದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
    ದೇವರಾಜ ಅರಸು ಪ್ರಶಸ್ತಿಯನ್ನು ಮೊದಲ ಬಾರಿಗೆ ಜಿಲ್ಲಾ ಮಟ್ಟದಲ್ಲಿ ನೀಡುತ್ತಿರುವುದು ಸಂತಸ ತಂದಿದೆ. ಶಿಕ್ಷಣ, ಸಾಮಾಜಿಕ ಹಾಗೂ ಆರ್ಥಿಕ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ತಂದು ಸಾಮಾಜಿಕ ಹರಿಕಾರರಾದವರು ದೇವರಾಜ ಅರಸರು ಎಂದರು.
    ಮೈಸೂರು ರಾಜ್ಯವನ್ನು ಕರ್ನಾಟಕವೆಂದು ಪುನರ್ ನಾಮಕರಣ ಮಾಡಿದ್ದು ಅವರ ಪ್ರಮುಖ ಸಾಧನೆಗಳಲ್ಲಿ ಒಂದಾಗಿದೆ. ಅವರ ಆಡಳಿತದಲ್ಲಿ ಹತ್ತು ಹಲವಾರು ಬದಲಾವಣೆಗಳಾಗಿವೆ. ಭೂಸುಧಾರಣೆ ಮೂಲಕ ಕ್ರಾಂತಿಕಾರಿ ಸಂಚಲ ಮೂಡಿಸಿತು. ಸಮಾಜದಲ್ಲಿ ಎಲ್ಲರಲ್ಲೂ ಸಮಾನತೆ ತರಲು ಶ್ರಮಿಸಿದರು ಎಂದು ಹೇಳಿದರು.
    ಜಿ.ಪಂ ಸಿಇಒ ಟಿ.ಭೂಬಾಲನ್ ಮಾತನಾಡಿ, ದೇವರಾಜ ಅರಸು ಆಡಳಿತ ಅವಯ ಆಡಳಿತದಲ್ಲಿ ಸಾಮಾಜಿಕ ಕಳಕಳಿಯ ಕಾರ್ಯಗಳು ದೇಶಕ್ಕೆ ಮಾದರಿಯಾಗಿವೆ. ನಾಯಕರಾದವರು ಸಮಾಜದಲ್ಲಿ ಹೇಗೆ ಇರಬೇಕೆಂಬುದನ್ನು ಅವರು ತೋರಿಸಿ ಕೊಟ್ಟಿದ್ದಾರೆ. ವಿದ್ಯಾರ್ಥಿಗಳು ಅವರ ಸಂದೇಶಗಳನ್ನು ಪಾಲಿಸಿ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಬಾಗಲಕೋಟೆ 95 ವರ್ಷದ ಮರಿಯಪ್ಪ ದುರಗಪ್ಪ ಕಟ್ಟಿಮನಿ ಅವರಿಗೆ ಜಿಲ್ಲಾ ಮಟ್ಟದ ದೇವರಾಜ ಅರಸು ಪ್ರಶಸ್ತಿ ಹಾಗೂ 50 ಸಾವಿರ ರೂ. ನಗದು ಅವರಿಗೆ ನೀಡಿ ಗೌರವಿಸಲಾಯಿತು. ಮುಗಳೊಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಬಸನಗೌಡ ಬಿರಾದಾರ ಉಪನ್ಯಾಸ ನೀಡಿದರು. ಅಪರ ಜಿಲ್ಲಾಕಾರಿ ಮಹಾದೇವ ಮುರಗಿ, ಮುಖಂಡರಾದ ನಾಗಪ್ಪ ಅಂಬಿ ಉಪಸ್ಥಿತರಿದ್ದರು. ಜಿಲ್ಲಾ ಹಿಂದುಳಿತ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ಚೌವ್ಹಾಣ ಸ್ವಾಗತಿಸಿದರು. ಶಿಕ್ಷಕ ಸಂಜಯ ನಡುವಿನಮನಿ ನಿರೂಪಿಸಿದರು. ಬಸಯ್ಯ ಗೋಳಮಠ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts