More

    ಅರುಣ್ ಸಿಂಗ್ ರಾಜ್ಯ ಭೇಟಿ ಉದ್ದೇಶ ತಿಳಿದಿಲ್ಲ, ಸಚಿವ ಎಂಟಿಬಿ ನಾಗರಾಜ್ ಸ್ಪಷ್ಟನೆ ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಣೆ

    ನಂದಗುಡಿ: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಯಾವ ವಿಷಯವಾಗಿ ಮಾತುಕತೆ ನಡೆಸುತ್ತಾರೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನಾರಚನೆ ವಿಷಯಗಳಲ್ಲಿ ಯಾವುದರ ಬಗ್ಗೆ ಮಾತನಾಡುತ್ತಾರೆ ಎಂಬ ಮಾಹಿತಿ ನನಗಿಲ್ಲ. ಸಭೆಗೆ ಬರಲು ತಿಳಿಸಿದ್ದಾರೆ. ಸಭೆಯಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಸ್ಪಷ್ಟಪಡಿಸಿದರು.

    ಹೊಸಕೋಟೆ ತಾಲೂಕು ಜಡಿಗೇನಹಳ್ಳಿ ಹೋಬಳಿಯ ಮುಗಬಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕರೊನಾದಿಂದ ತೊಂದರೆಗೆ ಒಳಗಾಗಿರುವವರಿಗೆ ಬುಧವಾರ ಬೆಳಗ್ಗೆ ದಿನಸಿ ಕಿಟ್ ವಿತರಿಸಿ ಮಾತನಾಡಿದರು. ಈಗಾಗಲೇ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಿಸುವ ಕಾರ್ಯಕ್ರಮಕ್ಕೆ ಸಚಿವ ಅಶೋಕ್ ಅವರು ಸಾಂಕೇತಿಕವಾಗಿ ಚಾಲನೆ ನೀಡಿದ್ದಾರೆ. ಕರೊನಾ ಪಿಡುಗಿನ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಸರ್ಕಾರ ಆರೋಗ್ಯ ತಜ್ಞರ ಸಲಹೆ ಮೇರೆಗೆ ಪೌಷ್ಟಿಕ ಆಹಾರವನ್ನು ವಿತರಿಸುತ್ತಿದೆ ಎಂದರು.

    ಸರ್ಕಾರದ ಆಶಯದಂತೆ ಹೊಸಕೋಟೆ ತಾಲೂಕಿನಲ್ಲಿ 5 ತಂಡಗಳನ್ನು ರಚಿಸಿ, ಪೌಷ್ಟಿಕ ಆಹಾರ ವಿತರಣೆ ಅಭಿಯಾನ ನಡೆಸಲಾಗುತ್ತಿದೆ. ಕರೊನಾ 3ನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚಿನ ತೊಂದರೆ ಆಗುವ ಆತಂಕದ ಹಿನ್ನೆಲೆಯಲ್ಲಿ ಈ ಕಾರ್ಯ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

    ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕರೊನಾದಿಂದ ಮೃತಪಟ್ಟ ಬಿಪಿಎಲ್ ಕಾರ್ಡ್‌ದಾರರ ಕುಟುಂಬಗಳಿಗೆ ಧನಸಹಾಯ ನೀಡುವುದಾಗಿ ೋಷಿಸಿದ್ದಾರೆ. ಇದರಿಂದ ಬಡವರಿಗೆ ತುಂಬಾ ಅನುಕೂಲವಾಗಲಿದೆ ಎಂದರು.

    ತಾಪಂ ಮಾಜಿ ಅಧ್ಯಕ್ಷ ವಿ.ಸಿ. ಜಯದೇವಯ್ಯ, ಗ್ರಾಪಂ ಮಾಜಿ ಅಧ್ಯಕ್ಷ ಜಿ.ಎಂ. ಕೃಷ್ಣಪ್ಪ, ಗ್ರಾಪಂ ಅಧ್ಯಕ್ಷೆ ಸುಬ್ಬಲಕ್ಷ್ಮೀ, ಮುಖಂಡರಾದ ಲಕ್ಷ್ಮಣ್, ಗಡಿಗೇನಹಳ್ಳಿ ಮಂಜುನಾಥ್, ಶ್ರೀನಿವಾಸ್ ನಾಯಕ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts