More

    ಅರ್ಜಿಗಳು ತ್ವರಿತವಾಗಿ ವಿಲೇವಾರಿ ಮಾಡಿ

    ಯಾದಗಿರಿ: ಭೂಮಿ ತಂತ್ರಾಂಶದಡಿ ಸಾರ್ವಜನಿಕರಿಂದ ಸ್ವೀಕರಿಸಿರುವ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ಶೀಘ್ರ ವಿಲೇವಾರಿ ಮಾಡುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯ ಆರ್. ಕಟ್ಟುನಿಟ್ಟಿನ ಸೂಚನೆ ನೀಡಿದರು.

    ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆದಿದ್ದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಈಗಾಗಲೇ ನಮ್ಮ ಜಿಲ್ಲೆ ರಾಜ್ಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿ ತೃತೀಯ ಸ್ಥಾನದಲ್ಲಿದೆ. ಇದಕ್ಕೆ ತಾಲೂಕು ಕಚೇರಿಯ ಅಧಿಕಾರಿ, ಸಿಬ್ಬಂದಿ ಸಹಕಾರ, ಕಾರ್ಯತತ್ಪರತೆಯೇ ಮೂಲ ಕಾರಣ ಎಂದರು.

    ತ್ರೀ ಆ್ಯಂಡ್ ನೈನ್ (3 ಮತ್ತು 9 ಕಲಂ) ಮಿಸ್ ಮ್ಯಾಚ್, ಪೈಕಿ ಪಹಣಿ, ಮೋಜನಿ ಕಡತಗಳು, ನವೋದಯ ಆ್ಯಪ್ ಮತ್ತು ಸ್ಮಶಾನ ಭೂಮಿಗಳ ಲಭ್ಯತೆ ಬಗ್ಗೆ ಹಾಗೂ ಸಕಾಲ ಯೋಜನೆಗಳ ಪ್ರಗತಿಯ ಮಾಹಿತಿ ಪಡೆದರು. ಸೇವೆಗಳನ್ನು ಆದ್ಯತೆಯಲ್ಲಿ ಒದಗಿಸಿ ಪ್ರಗತಿ ಕುಂಠಿತವಾಗದಂತೆ ನೋಡಿಕೊಳ್ಳಬೇಕು ಎಂದರು.

    ಜಿಲ್ಲೆಯಲ್ಲಿ ಜನೇವರಿ ತಿಂಗಳಲ್ಲಿ ಯಾದಗಿರಿ 8, ಸುರಪುರ 12, ಗುರುಮಠಕಲ್ 8, ಹುಣಸಗಿ 5 ಒಟ್ಟು 33 ಗ್ರಾಮಗಳ ಸ್ಮಶಾನ ಭೂಮಿಗಾಗಿ ಜಮೀನು ಮಂಜೂರು ಮಾಡಲಾಗಿದೆ. ಅದರಂತೆ ಜಮೀನು ಲಭ್ಯವಿಲ್ಲದ ಗ್ರಾಮಗಳಲ್ಲಿ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.

    ಅಪರ ಡಿಸಿ ಶಂಕರಗೌಡ ಸೋಮನಾಳ, ಸಹಾಯಕ ಆಯುಕ್ತ ಪ್ರಶಾಂತ ಹನಗಂಡಿ, ತಹಸೀಲ್ದಾರರಾದ ಚನ್ನಮಲ್ಲಪ್ಪ ಘಂಟಿ, ಮಧುರಾಜ್,ಸುಬ್ಬಣ್ಣ ಜಮಖಂಡಿ, ಸುರೇಶ ಅಂಕಲಗಿ, ಶರಣಬಸವ, ಅಶೋಕ ಸುರಪುರಕರ ಇದ್ದರು.

    ಜನರ ಮನೆ ಬಾಗಿಲಿಗೆ ಡಿಜಿಟಲ್ ಸೇವೆ
    ಜಿಲ್ಲೆಯ ಜನರ ಮನೆ ಬಾಗಿಲಿಗೆ ಡಿಜಿಟಲ್ ಸೇವೆ ತಲುಪಿಸಿ, ಜನರನ್ನು ಡಿಜಿಟಲ್ ಸಾಕ್ಷರರನ್ನಾಗಿ ಮಾಡಲು (ಸಿಎಸ್ಸಿ) ಸಾಮಾನ್ಯ ಸೇವಾ ಕೇಂದ್ರಗಳು ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯ ಆರ್. ತಿಳಿಸಿದರು. ಕಚೇರಿ ಆವರಣದಲ್ಲಿ ಭಾರತ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ, ಡೆಲ್ ಟೆಕ್ನಾಲಜೀಸ್, ಲರ್ನಿಂಗ್ ಫೌಂಡೇಷನ್ ಹಾಗೂ ಡಿಜಿಟಲ್ ಇಂಡಿಯಾ ಕಾರ್ಯಕ್ರಮ ಸಾಮಾನ್ಯ ಸೇವಾ ಕೇಂದ್ರಗಳ ಸಹಯೋಗದೊಂದಿಗೆ ಡಿಜಿಟಲ್ ಸೇವೆ ತಲುಪಿಸುವ ವಾಹನಕ್ಕೆ ಬುಧವಾರ ಚಾಲನೆ ನೀಡಿ ಮಾತನಾಡಿ, ಸಾರ್ವಜನಿಕರು ಇದರ ಲಾಭ ಪಡೆದುಕೊಳ್ಳಬೇಕು ಎಂದರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts