More

    ಅರ್ಧಕ್ಕೆ ನಿಂತ ನಾಡ ಕಚೇರಿ ಕಟ್ಟಡ

    ಕೊಡೇಕಲ್ : ಗ್ರಾಮದ ಗ್ರಾಮ ಪಂಚಾಯಿತಿ ಬಳಿ ನಿರ್ಮಿಸುತ್ತಿರುವ ನಾಡ ಕಚೇರಿ ಕಟ್ಟಡ ಕಾಮಗಾರಿ ಗುಣಮಟ್ಟದ್ದಾಗಿಲ್ಲ ಎಂದು ದೂರಿನ ಮೇರೆಗೆ ಮೂರು ತಿಂಗಳಿAದ ಅರ್ಧಕ್ಕೆ ಸ್ಥಗಿತಗೊಂಡAತಾಗಿದೆ.

    ಸಧ್ಯ ಕೃಷ್ಣಾ ಭಾಗ್ಯ ಜಲ ನಿಗಮದ ಕಚೇರಿಯಲ್ಲಿ ನಾಡ ಕಚೇರಿ ಕಾರ್ಯನಿರ್ವಹಿಸುತ್ತಿದ್ದು, ಇಲ್ಲಿ ಸಮರ್ಪಕ ಸೌಲಭ್ಯಗಳಿಲ್ಲದ ಕಾರಣ ಜಿಲ್ಲಾಧಿಕಾರಿ ಕಂದಾಯ ಇಲಾಖೆಯಿಂದ ೬೦ ಲಕ್ಷ ರೂ. ಅನುದಾನ ಬಿಡುಗಡೆ ಮಾಡಿ ಕಚೇರಿ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದ್ದರು. ಅದರಂತೆ ಕಾಮಗಾರಿ ಕೂಡ ನಿರ್ಮಿತಿ ಕೇಂದ್ರದವರಿಗೆ ವಹಿಸಿತ್ತು.

    ಆರಂಭದ ಕೆಲ ದಿನಗಳಲ್ಲಿ ತ್ವರಿತ ಗತಿಯಲ್ಲಿ ಸಾಗಿತ್ತು. ಆದರೆ ಈ ಕಾಮಗಾರಿಗೆ ಬಳಕೆ ಮಾಡುತ್ತಿರುವ ಸಿಮೆಂಟ್ ಮತ್ತು ಇಟ್ಟಂಗಿ ತೀರಾ ಕಳಪೆಯಿಂದ ಕೂಡಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕರ‍್ಯಕರ್ತರು ಜಿಲ್ಲಾಧಿಕಾರಿ ಮತ್ತು ತಹಸೀಲ್ದಾರ್ ಗಮನಕ್ಕೆ ತಂದ ನಂತರ ಕಾಮಗಾರಿ ಸ್ಥಗಿತಗೊಳಿಸಲಾಗಿದೆ.
    ಕ್ಯಾಂಪ್‌ನಲ್ಲಿ ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ಶೀಘ್ರ ನಾಡಕಚೇರಿ ನಿರ್ಮಾಣವಾಗಿ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂಬ ಆಶಾ ಭಾವನೆ ಹೊಂದಿದ ಸಾರ್ವಜನಿಕರಿಗೆ ಕಾಮಗಾರಿ ಸ್ಥಗಿತಗೊಂಡಿದ್ದರಿAದ ನಿರಾಶೆ ತರಿಸಿದೆ.

    ಒಟ್ಟಾರೆ ದೇವರು ವರ ಕೊಟ್ಟರು ಪೂಜಾರಿ ಕೊಡಲಿಲ್ಲ ಎನ್ನುವ ಗಾದೆ ಮಾತಿನಂತೆ ಕೊಡೇಕಲ್ ನಾಡ ಕಚೇರಿ ಕಟ್ಟಡ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಜಿಲ್ಲಾಧಿಕಾರಿ ಹಾಗೂ ತಾಲೂಕು ಆಡಳಿತ ಶೀಘ್ರ ಗಮನ ಹರಿಸಿ, ಕಾಮಗಾರಿ ಪುನರಾರಂಭಕ್ಕೆ ಕ್ರಮ ಕೈಗೊಳ್ಳಬೇಕಾದ ಜರೂರಿ ಇದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts