More

    ಅರ್ಹರಿಗೆ ಯೋಜನೆಗಳನ್ನು ತಲುಪಿಸಿ; ಗ್ರಾಪಂ ಮಾಜಿ ಅಧ್ಯಕ್ಷೆ ಲಲಿತಮ್ಮ ಸಲಹೆ

    ಹನುಮಸಾಗರ: ಸರ್ಕಾರ ನೀಡುವ ಸೌಲಭ್ಯಗಳನ್ನು ಗರ್ಭಿಣಿಯರು, ಬಾಣಂತಿಯರಿಗೆ ಮತ್ತು ಮಕ್ಕಳಿಗೆ ಅಂಗನವಾಡಿ ಕಾರ್ಯಕರ್ತೆಯರು ತಲುಪಿಸಬೇಕು ಎಂದು ಗ್ರಾಪಂ ಮಾಜಿ ಅಧ್ಯಕ್ಷೆ ಲಲಿತಮ್ಮ ಹುಲ್ಲೂರು ಹೇಳಿದರು.

    ಇಲ್ಲಿನ 1ನೇ ಅಂಗನವಾಡಿ ಕೇಂದ್ರ ನೂತನ ಕಟ್ಟಡವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು. ಮಕ್ಕಳು ಮತ್ತು ಮಹಿಳೆಯರ ಅಪೌಷ್ಟಿಕತೆ ನಿವಾರಣೆ ಮಾಡಲು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳನ್ನು ಅರ್ಹರಿಗೆ ತಲುಪಿಸುವ ಜವಾಬ್ದಾರಿ ಕಾರ್ಯಕರ್ತೆಯರ ಮೇಲಿದ್ದು, ಪ್ರಾಮಾಣಿಕವಾಗಿ ಕೆಲಸ ಮಾಡಬೇಕಿದೆ ಎಂದರು.

    ನರೇಗಾ ಯೋಜನೆಯಡಿ ಗ್ರಾಪಂನಿಂದ 14 ಲಕ್ಷ ರೂ. ಅನುದಾನದಲ್ಲಿ ಅಂಗನವಾಡಿ ಕೇಂದದ ಕಟ್ಟಡ ನಿರ್ಮಿಸಲಾಗಿದೆ. ಕೇಂದ್ರದಲ್ಲಿ ಅಡುಗೆ ಕೋಣೆ, ದಾಸ್ತಾನು ಕೊಠಡಿ, ಮಕ್ಕಳು ಕುಳಿತುಕೊಳ್ಳಲು ದೊಡ್ಡದಾದ ಹಾಲ್, ಮಹಿಳಾ ಸಂಘದ ಸದಸ್ಯರಿಗೆ ಎನ್‌ಆರ್‌ಎಲ್‌ಎಂ ಕೊಠಡಿ ಹಾಗೂ ಎರಡು ಶೌಚಗೃಹ ಕೊಠಡಿಗಳಿವೆ. ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಉತ್ತಮ ವಾತಾವರಣ ಕಲ್ಪಿಸಲಾಗಿದೆ ಎಂದರು.

    ಗ್ರಾಪಂ ಸದಸ್ಯೆ ದುರಗಮ್ಮ ಹನುಮಂತ ಪೂಜಾರ, ಅಂಗನವಾಡಿ ಮೇಲ್ವಿಚಾರಕಿ ಮಂಜುಳಾ ಹಕ್ಕಿ, ಕಾರ್ಯಕರ್ತೆ ಶಿವಮ್ಮ ಗದ್ದಿ, ಸಹಾಯಕಿ ರೇಣುಕಾ ಕವಲೂರು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts