More

    ಅರ್ಹ ಫಲಾನುಭವಿಗಳಿಗೆ ಸಿಗಲಿ ಆಶ್ರಯ ಮನೆ

    ಗದಗ: ಆಶ್ರಯ ಮನೆ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸಹಾಯಧನ ದೊರಕಬೇಕು. ಸಹಾಯಧನ ದುರುಪಯೋಗ ಪಡಿಸಿಕೊಂಡಂತಹ ಫಲಾನುಭವಿಗಳನ್ನು ಗುರುತಿಸಿ ಅವರ ಮೇಲೆ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಸುಂದರೇಶಬಾಬು ಹೇಳಿದರು.

    ಗದಗ-ಬೆಟಗೇರಿ ನಗರಸಭೆ ಸಭಾಭವನದಲ್ಲಿ ಬುಧವಾರ ಆಯೋಜಿಸಿದ್ದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಗದಗ-ಬೆಟಗೇರಿ ನಗರಸಭೆ ಆಶ್ರಯ ಯೋಜನೆಯಡಿ ಮನೆಗಳ ಹಂಚಿಕೆ ಮಾಡಲಾಗಿದ್ದು ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಸಹಾಯಧನವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆಯಾದ ಅನುದಾನ ಸದ್ಬಳಕೆಯಾಗಬೇಕು. ಸುಳ್ಳು ದಾಖಲೆ ನೀಡಿ ಸಹಾಯಧನ ಪಡೆದು ಸರ್ಕಾರಕ್ಕೆ ವಂಚಿಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಪೌರಾಯುಕ್ತರಿಗೆ ನಿರ್ದೇಶನ ನೀಡಿದರು.

    ಪೌರಕಾರ್ವಿುಕರಿಗೆ ಸೂಕ್ತ ಸುರಕ್ಷಾ ಪರಿಕರಗಳನ್ನು ನಿಯಮಿತವಾಗಿ ನೀಡಿ ಅವರ ಆರೋಗ್ಯದ ಬಗ್ಗೆ ನಿಗಾವಹಿಸಬೇಕು. ಆತ್ಮನಿರ್ಭರ ಭಾರತ ಯೋಜನೆಯಡಿ ಎಲ್ಲ ಬೀದಿ ವ್ಯಾಪಾರಸ್ಥರ ಸರ್ವೆ ಕಾರ್ಯವನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ ಯೋಜನೆ ಕಿರು ಸಾಲ ಸಹಾಯ ಧನ ಒದಗಿಸಲು ಕ್ರಮಕೈಗೊಳ್ಳಬೇಕು ಎಂದರು.

    ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ ಎಸ್.ಎನ್, ಪೌರಾಯುಕ್ತ ರಮೇಶ ಜಾಧವ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts