More

    ಅಲಗುಮೂಲೆಗೆ ಬಸ್ ಸೇವೆ ಮರೀಚಿಕೆ

    ಹನೂರು: ಗ್ರಾಮಕ್ಕೆ ಬಸ್ಸಿನ ಸೌಕರ್ಯ ಇಲ್ಲದ ಪರಿಣಾಮ ಆಟೋಗಳ ಮೂಲಕ ತೆರಳಬೇಕಿದೆ, ಕಾಡುಪ್ರಾಣಿಗಳು ಜಮೀನಿನತ್ತ ಲಗ್ಗೆ ಇಡುತ್ತಿವೆ, ಖಾತೆ ಬದಲಾವಣೆ ಮಾಡಿಕೊಡುವಲ್ಲಿ ವಿಳಂಬವಾಗುತ್ತಿದೆ, ಇತ್ತ ಸಂಪರ್ಕ ಕಲ್ಪಿಸುವ ರಸ್ತೆ ತೀವ್ರ ಹದಗೆಟ್ಟಿದೆ…

    ಇದು ಹನೂರು ತಾಲೂಕಿನ ಮಣಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಗ್ರಾಮ ಅಲಗುಮೂಲೆ ಗ್ರಾಮಸ್ಥರು ಎದುರಿಸುತ್ತಿರುವ ಸಮಸ್ಯೆಗಳು. ಅ.15 ರಂದು ಗ್ರಾಮದಲ್ಲಿ ನಡೆಯುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸಮಸ್ಯೆಗಳಿಗೆ ಮುಕ್ತಿ ಸಿಗಲಿದೆಯೇ ಎಂಬ ಆಶಾಭಾವನೆಯನ್ನು ಗುರುವಾರ ವಿಜಯವಾಣಿಯೊಂದಿಗೆ ಮಾತನಾಡಿ ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

    ತಾಲೂಕು ಕೇಂದ್ರದಿಂದ 9 ಕಿಮೀ ದೂರದಲ್ಲಿರುವ ಈ ಗ್ರಾಮವು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿದೆ. ಗ್ರಾಮದಲ್ಲಿ 165 ಕುಟುಂಬಗಳಿದ್ದು, 583ಕ್ಕೂ ಹೆಚ್ಚಿನ ಜನಸಂಖ್ಯೆ ಹೊಂದಿದೆ. ಇಲ್ಲಿ ಲಿಂಗಾಯತ ಸಮುದಾಯದ ಜನರು ಮಾತ್ರ ವಾಸಿಸುತ್ತಿದ್ದು, ಬಹುತೇಕ ಜನರು ಕೃಷಿಯನ್ನು ಅವಲಂಬಿಸಿದ್ದಾರೆ. ಇಲ್ಲಿನ ಜನರಿಗೆ ಗ್ರಾಪಂ ವತಿಯಿಂದ ಕುಡಿಯುವ ನೀರು, ಬೀದಿ ದೀಪ, ರಸ್ತೆ, ಚರಂಡಿ ಸೇರಿದಂತೆ ಇನ್ನಿತರ ಮೂಲ ಸೌಕರ್ಯವನ್ನು ಒದಗಿಸಲಾಗಿದೆ. ಆದರೆ ಬಸ್ ಸೌಕರ್ಯ ಇಲ್ಲ. ಇದರಿಂದ ಇಲ್ಲಿನ ಜನರು ಸಂಚಾರಕ್ಕಾಗಿ ಪಡಬಾರದ ಕಷ್ಟ ಪಡುತ್ತಿದ್ದಾರೆ. ಇತ್ತ ಕಾಡು ಪ್ರಾಣಿಗಳು ರಾತ್ರಿ ವೇಳೆ ಜಮೀನುಗಳಿಗೆ ಲಗ್ಗೆ ಇಟ್ಟು ಫಸಲನ್ನು ನಾಶಪಡಿಸುತ್ತಿವೆ. ಗ್ರಾಮದ ರಸ್ತೆಯು ಹಾಳಾಗಿರುವುದರಿಂದ ಸಂಚಾರಕ್ಕೆ ತೊಡಕಾಗಿ ಪರಿಣಮಿಸಿದೆ. ಜತೆಗೆ ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ಹಲವು ಸಮಸ್ಯೆಗಳಿವೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts