More

    ಅಲೆಮಾರಿಗಳ ಏಳಿಗೆಗೆ ಯತ್ನಿಸಿ

    ಗದಗ: ಅಲೆಮಾರಿ, ಅರೆ ಅಲೆಮಾರಿ ಸಮುದಾಯದವರಿಗೆ ನಿಗಮದಿಂದ ದೊರೆಯಬೇಕಾದ ಸೌಲಭ್ಯ ಗಳನ್ನು ತಲುಪಿಸು ವುದರೊಂದಿಗೆ ಸಮುದಾಯದ ಏಳಿಗೆಗೆ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುವಂತೆ ನಿಗಮದ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಅಧಿಕಾರಿಗಳಿಗೆ ಸೂಚಿಸಿದರು.

    ಗದಗ ಜಿಲ್ಲಾಡಳಿತ ಭವನದಲ್ಲಿರುವ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಅಲೆಮಾರಿ ಜನಾಂಗದ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸಾಲ ಸೌಲಭ್ಯಗಳನ್ನು ಮಂಜೂರು ಮಾಡಿಸುವುದರ ಮೂಲಕ ಸಮುದಾಯದ ಆರ್ಥಿಕ ಪ್ರಗತಿಗೆ ಅಧಿಕಾರಿಗಳು ಶ್ರಮಿಸಬೇಕು. ಶೈಕ್ಷಣಿಕವಾಗಿಯೂ ತುಂಬ ಹಿಂದುಳಿದಿರುವ ಜನಾಂಗದ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಲು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವಂತೆ ಸೂಚಿಸಿದರು. ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಟಿ. ಪ್ರಿಯದರ್ಶಿನಿ ಮಾತನಾಡಿ, 2020-21 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ಸಾಲ ಯೋಜನೆ ಯಡಿ 25 ಫಲಾನುಭವಿಗಳಿಗೆ 12.50 ಲಕ್ಷ ರೂಪಾಯಿ ಆರ್ಥಿಕ ಸಹಾಯಧನ ವಿತರಿಸುವ ಗುರಿ ಹೊಂದಲಾಗಿತ್ತು. ಇದರಲ್ಲಿ 21 ಫಲಾನುಭವಿಗಳಿಗೆ 10.50 ಲಕ್ಷ ರೂಪಾಯಿ ವಿತರಿಸಲಾಗಿದೆ. ಕಿರುಸಾಲ ಯೋಜನೆಯಡಿ 10 ಫಲಾನುಭವಿಗಳಿಗೆ 2 ಲಕ್ಷ ನೀಡಲಾಗಿದೆ ಎಂದು ತಿಳಿಸಿದರು. ಜಿಲ್ಲಾ ಗೊಲ್ಲ ಸಮಾಜದ ಅಧ್ಯಕ್ಷ ಹರೀಶ ಪೂಜಾರ, ಗೋಂದಳಿ ಸಮಾಜದ ಮುಖಂಡ ವಿಠಲ ಗಣಾಚಾರಿ, ನಿಗಮದ ಸಹಾಯಕ ಅಭಿವೃದ್ಧಿ ಅಧಿಕಾರಿ ಗುರುರಾಜ ಕುಲಕರ್ಣಿ ಹಾಗೂ ಸಿಬ್ಬಂದಿ ಇದ್ದರು.

    ಸರ್ವಾಂಗೀಣ ಅಭಿವೃದ್ಧಿಗೆ ಕ್ರಮ

    ಗದಗ: ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಡಿಯಲ್ಲಿ ಒಟ್ಟು 46 ಸಮುದಾಯಗಳಿದ್ದು, ಇವುಗಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವುದಾಗಿ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಹೇಳಿದರು.

    ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಲೆಮಾರಿ ಸಮುದಾಯವು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದ್ದು, ಸಮುದಾಯದ ಆರ್ಥಿಕ ಸಬಲತೆಗಾಗಿ ಕಾರ್ಯ ನಿರ್ವಹಿಸುವುದಾಗಿ ತಿಳಿಸಿದರು.

    ಸರ್ಕಾರದ ವಿವಿಧ ಇಲಾಖೆಗಳಲ್ಲಿರುವ ಸೌಲಭ್ಯಗಳ ಸದ್ಬಳಕೆ ಮಾಡಿಕೊಳ್ಳುವುದರ ಮೂಲಕ ಸಮುದಾಯಗಳನ್ನು ಸಮಾಜದ ಮುಖ್ಯವಾಹಿನಿಗೆ ತರಲಾಗುವುದು. ಸಮುದಾಯಕ್ಕೆ ಪ್ರತಿ ಜಿಲ್ಲೆಗೊಂದರಂತೆ ಸಭಾಭವನ ನಿರ್ವಿುಸಬೇಕು. ಅದಕ್ಕೆ ಅಗತ್ಯವಿರುವ ಅನುದಾನ ಕ್ರೋಡೀಕರಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಜನಾಂಗಕ್ಕೆ ಪ್ರತ್ಯೇಕ ಸ್ಮಶಾನ ನಿರ್ವಿುಸಲು ಪ್ರಯತ್ನಿಸಲಾಗುವುದು ಎಂದರು. ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಕಾಂತಿಲಾಲ ಬನ್ಸಾಲಿ, ಶಂಕರ ಹೆಬ್ಬಳ್ಳಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts