More

    ಅಲೆಮಾರಿ ಮಹಾಒಕ್ಕೂಟಕ್ಕೆ ಕುಮಾರ ಯಾದವ ಜಿಲ್ಲಾಧ್ಯಕ್ಷ

    ಕಲಬುರಗಿ: ನಗರದ ಜಫರಾಬಾದ್ ಕ್ರಾಸ್ ಬಳಿಯ ಅಖಿಲ ಕರ್ನಾಟಕ ಗೊಂದಳಿ ಸಮಾಜ ಸಂಘದ ಕಾರ್ಯಾಲಯದಲ್ಲಿ ಭಾನುವಾರ ಏರ್ಪಡಿಸಿದ್ದ ಅಲೆಮಾರಿ ಮಹಾ ಒಕ್ಕೂಟದ ಜಿಲ್ಲಾ ಮಟ್ಟದ ಸಭೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಸಂತೋಷ ಸಿಂಧೆ ಅವರ ನೇತೃದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಅಲೆಮಾರಿ/ಅರೆ-ಅಲೆಮಾರಿ ವಿಮುಕ್ತ ಬುಡಕಟ್ಟು ಸಮುದಾಯಗಳ ಮಹಾ ಒಕ್ಕೂಟದ ಕಲಬುರಗಿ ಜಿಲ್ಲಾ ನೂತನ ಅಧ್ಯಕ್ಷರಾಗಿ ಕುಮಾರ ಯಾದವ ಹಾಗೂ ಉಪಾಧ್ಯಕ್ಷರಾಗಿ ಶೇಖರ ಸಿಂಗ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಭೆಯಲ್ಲಿ ಅಲೆಮಾರಿ ಸಮುದಾಯದ ಎಲ್ಲಾ ಮುಖಂಡರು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts