More

    ಅಳ್ನಾವರ ಆಸ್ಪತ್ರೆಯಲ್ಲಿ ಅವ್ಯವಸ್ಥೆ

    ಅಳ್ನಾವರ: ಪಟ್ಟಣದ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಸೂಕ್ತ ವ್ಯವಸ್ಥೆಗಳಿಲ್ಲದೆ ಅನಾರೋಗ್ಯ ಕೇಂದ್ರದಂತಾಗಿದೆ.

    5 ದಶಕಗಳಷ್ಟು ಹಳೆಯದಾದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಶುಚಿತ್ವ ಎದ್ದುಕಾಣುತ್ತಿದೆ. ಕಾಯಂ ವೈದ್ಯರಿಲ್ಲದೆ ರೋಗಿಗಳು ಸಂಕಷ್ಟ ಅನುಭವಿಸುವಂತಾಗಿದೆ. ಜತೆಗೆ ಕಟ್ಟಡವೂ ಶಿಥಿಲಗೊಂಡಿದೆ. ಧಾರವಾಡ ಜಿಲ್ಲೆಯ ಗಡಿಭಾಗದಲ್ಲಿರುವ ಅಳ್ನಾವರ ತಾಲೂಕು ಮತ್ತು ಪಕ್ಕದ ಹಳಿಯಾಳ, ಖಾನಾಪೂರ ಹಾಗೂ ಬೈಲಹೊಂಗಲ ತಾಲೂಕುಗಳ ಅಂದಾಜು 35 ಹಳ್ಳಿಗಳ 65 ಸಾವಿರ ಜನಸಂಖ್ಯೆಗೆ ಇದೊಂದೇ ಆಸ್ಪತ್ರೆ ಆಧಾರವಾಗಿದೆ.

    ಕೇಂದ್ರದಲ್ಲಿ ಗುತ್ತಿಗೆ ಆಧಾರಿತ ಆಯುಷ್ ವೈದ್ಯ ಹಾಗೂ ಸ್ನಾತಕೋತ್ತರ ವೈದ್ಯಕೀಯ ತರಬೇತಿ ಪಡೆದ ವೈದ್ಯರೊಬ್ಬರು ಕಾರ್ಯನಿರ್ವಹಿಸುತ್ತಿದ್ದಾರೆ. ಹಿರಿಯ ಆರೋಗ್ಯ ನಿರೀಕ್ಷಕರ 2 ಹುದ್ದೆಗಳ ಪೈಕಿ ಒಬ್ಬರು, ಕಿರಿಯ ಆರೋಗ್ಯ ಸಹಾಯಕರ 4 ಹುದ್ದೆಗಳಲ್ಲಿ ಒಬ್ಬರು ಕಾರ್ಯ ನಿರ್ವಹಿಸುತ್ತಿದ್ದಾರೆ. ತುರ್ತಚಿಕಿತ್ಸೆ ಹಾಗೂ ಅಪಘಾತಕ್ಕೀಡಾದವರು ರಾತ್ರಿ ಸಮಯದಲ್ಲಿ 32 ಕಿಮೀ ದೂರದ ಧಾರವಾಡ ಜಿಲ್ಲಾಸ್ಪತ್ರೆಗೆ ತೆರಳಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಕೆಲ ಸಂದರ್ಭದಲ್ಲಿ ಮಾರ್ಗ ಮಧ್ಯದಲ್ಲಿಯೇ ಕೆಲವರು ಮೃತಪಟ್ಟ ಘಟನೆಗಳೂ ನಡೆದಿವೆ.

    ಆಸ್ಪತ್ರೆ ಕಟ್ಟಡ ಸೇರಿದಂತೆ ಸಿಬ್ಬಂದಿಯ 6 ವಸತಿಗೃಹಗಳು ದುರಸ್ತಿಯಲ್ಲಿವೆ. ಆಸ್ಪತ್ರೆ ಕಟ್ಟಡ ಶಿಥಿಲಗೊಂಡ ಕಾರಣ ಮಳೆಗಾಲದಲ್ಲಿ ಸೋರುತ್ತದೆ. ಇರುವ ಆರು ಬೆಡ್​ಗಳು ಅವ್ಯವಸ್ಥೆಯಿಂದ ಕೂಡಿದ್ದು, ರೋಗಿಗಳು ಬರಲು ಮೂಗು ಮುರಿಯುತ್ತಿದ್ದಾರೆ. ಆಸ್ಪತ್ರೆ ಆವರಣದಲ್ಲಿ ಗಿಡಗಂಟಿ ಬೆಳೆದಿದ್ದು, ಸೊಳ್ಳೆ, ಕ್ರಿಮಿಕೀಟಗಳ ಹಾವಳಿ ಹೆಚ್ಚಾಗಿದೆ.

    ಕಳೆದೆರಡು ವರ್ಷಗಳಿಂದ ಆರೋಗ್ಯ ಕೇಂದ್ರವನ್ನು 1.80 ಕೋಟಿ ರೂ. ಅನುದಾನದಲ್ಲಿ ಅಭಿವೃದಿಟಛಿ ಪಡಿಸಲಾಗುವುದು ಎಂದು ಕ್ಷೇತ್ರದ ಶಾಸಕ ಸಿ.ಎಂ. ನಿಂಬಣ್ಣವರ ಹಲವು ಬಾರಿ ತಿಳಿಸಿದ್ದಾರೆ. ಆದರೆ, ಇಲ್ಲಿಯವರೆಗೂ ಯಾವುದೇ ಕಾರ್ಯಗಳು ನಡೆದಿಲ್ಲ ಎಂದು ಸ್ಥಳಿಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಕಳೆದ ಹತ್ತು ದಿನಗಳಿಂದ ಅಳ್ನಾವರ ಆರೋಗ್ಯ ಕೇಂದ್ರದ ಉಸ್ತುವಾರಿ ನೋಡಿಕೊಳ್ಳುತ್ತಿದ್ದು, ಸಮಸ್ಯೆಗಳ ಬಗ್ಗೆ ತಿಳಿದುಕೊಂಡು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗುವುದು.

    | ಡಾ. ಎಸ್.ಬಿ. ಕಳಸೂರಮಠ

    ತಾಲೂಕು ವೈದ್ಯಾಧಿಕಾರಿ ಧಾರವಾಡ



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts