More

    ಅವಕಾಶ ಬಳಸಿಕೊಂಡು ಸ್ವಾವಲಂಬಿಗಳಾಗಿ

    ಗದಗ: ಸ್ಪರ್ಧಾತ್ಮಕ ಯುಗದಲ್ಲಿ ನಿರುದ್ಯೋಗ ಯುವಕ- ಯುವತಿಯರು ಸರ್ಕಾರಿ ಉದ್ಯೋಗವನ್ನೇ ನೆಚ್ಚಿಕೊಳ್ಳದೆ ದೊರೆತ ಅವಕಾಶಗಳನ್ನು ಬಳಸಿಕೊಂಡು ಸ್ವಾವಲಂಬಿಗಳಾಗಿ ಬದುಕಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.

    ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕೌಸಲ್ಯಾಭಿವೃದ್ಧಿ ಇಲಾಖೆ ವತಿಯಿಂದ ಸೋಮವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಸಮಾರೋಪ ಸಮಾರಂಭದಲ್ಲಿ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು.

    ಜಿಲ್ಲೆಯಿಂದ 5 ಅಂಗವಿಕಲರು ಆಯ್ಕೆಯಾಗಿದ್ದು ಸಂತೋಷದ ಸಂಗತಿ. ಅಂಗವಿಕಲರು ಯಾರಿಗೂ ಹೊರೆ ಆಗಬಾರದು ಎಂಬ ಉದ್ದೇಶದೊಂದಿಗೆ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಅಂಗವಿಕಲರಿಗಾಗೇ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

    ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಮಲ್ಲೂರ ಬಸವರಾಜ, ಇತರರು ಭಾಗವಹಿಸಿದ್ದರು.

    564 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ: ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ತನುಜಾ ರಾಮಪುರೆ ಮಾತನಾಡಿ, 2 ದಿನಗಳ ಉದ್ಯೋಗ ಮೇಳದಲ್ಲಿ 129 ಉದ್ಯೋಗದಾತರು ಭಾಗವಹಿಸಿದ್ದರು. ಮೊದಲ ದಿನ 1069 ಪುರುಷ, 608 ಮಹಿಳಾ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು. ಅದರಲ್ಲಿ 281 ಪುರುಷ, 53 ಮಹಿಳಾ ಉದ್ಯೋಗಾಂಕ್ಷಿಗಳನ್ನು ಉದ್ಯೋಗದಾತರು ಆಯ್ಕೆ ಮಾಡಿದ್ದು, 519 ಅಭ್ಯರ್ಥಿಗಳನ್ನು ಮುಂದಿನ ಹಂತಕ್ಕೆ ಆಯ್ಕೆ ಮಾಡಿದ್ದಾರೆ. 2ನೇ ದಿನ 763 ಪುರುಷ, 267 ಮಹಿಳಾ ಉದ್ಯೋಗಾಂಕ್ಷಿಗಳು ಭಾಗವಹಿಸಿದ್ದು, ಅದರಲ್ಲಿ 170 ಪುರುಷ, 60 ಮಹಿಳಾ ಅಭ್ಯರ್ಥಿಗಳು ಆಯ್ಕೆಯಾಗಿದ್ದು, 491 ಅಭ್ಯರ್ಥಿಗಳನ್ನು ಮುಂದಿನ ಹಂತಕ್ಕೆ ಆಯ್ಕೆ ಮಾಡಲಾಗಿದೆ. ಒಟ್ಟು 564 ಅಭ್ಯರ್ಥಿಗಳಿಗೆ ಉದ್ಯೋಗದಾತರು ನೇಮಕಾತಿ ಪತ್ರಗಳನ್ನು ವಿತರಿಸಿದ್ದಾರೆ ಎಂದು ಮಾಹಿತಿ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts