More

    ಅವಘಡ ನಿರ್ವಹಣೆ ಕಲ್ಪಿತ ಪ್ರದರ್ಶನ

    ಬೆಳಗಾವಿ: ತಾಲೂಕಿನ ದೇಸೂರಿನ ಬಿಪಿಸಿಎಲ್-ಐಒಸಿಎಲ್ ಪೆಟ್ರೋಲಿಯಂ ಶೇಖರಣಾ ಕೇಂದ್ರದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಎನ್‌ಡಿಆರ್‌ಎಫ್ ವತಿಯಿಂದ ಸೋಮವಾರ ವಿಪತ್ತು ಸಂದರ್ಭ ನಿರ್ವಹಣೆ ಕುರಿತು ರಕ್ಷಣಾ, ಕಲ್ಪಿತ ಪ್ರದರ್ಶನ ಜರುಗಿತು. ಪೆಟ್ರೋಲಿಯಂ ಸ್ಟೋರೇಜ್‌ಗಳಲ್ಲಿ, ಪೆಟ್ರೋಲಿಯಂ ವ್ಯಾಗನ್, ಟ್ಯಾಂಕರ್ ಸೋರಿಕೆ, ಬೆಂಕಿ ಅವಘಡ ಸಂಭವಿಸಿದಲ್ಲಿ ಅದನ್ನು ನಿಯಂತ್ರಣಕ್ಕೆ ತರಲು ಹಾಗೂ ಅದರಿಂದಾಗುವ ಪರಿಣಾಮ ತಗ್ಗಿಸುವ ದೃಷ್ಟಿಯಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತುರ್ತಾಗಿ, ಪರಿಣಾಮಕಾರಿಯಾಗಿ ನಿಭಾಯಿಸುವ ನಿಟ್ಟಿನಲ್ಲಿ ಕಲ್ಪಿತ ಪ್ರದರ್ಶನ ಕೈಗೊಳ್ಳಲಾಯಿತು. ಬೆಳಗಾವಿ ಉಪವಿಭಾಗಾಧಿಕಾರಿ ಬಲರಾಮ ಚವ್ಹಾಣ ಹಾಗೂ ಜಿಲ್ಲಾ ಕಾರ್ಖಾನೆಗಳ ಉಪ ನಿರ್ದೇಶಕ ವೆಂಕಟೇಶ ರಾಠೋಡ ನಿರ್ದೇಶನದಂತೆ ಕಲ್ಪಿತ ಪ್ರದರ್ಶನ ಜರುಗಿತು. ಅವಘಡ ಸಂಭವಿಸಿದ ಕುರಿತು ಮಾಹಿತಿ ಬಂದ ತಕ್ಷಣವೇ ಜಿಲ್ಲಾಡಳಿತದಿಂದ ಸಂಬಂಧಿಸಿದ ಎಲ್ಲ ಇಲಾಖೆಗಳಿಗೆ ಸೂಚಿಸಿ, ಘಟನೆ ಸ್ಥಳಕ್ಕೆ ಭೇಟಿ ನೀಡಿ ಅವಘಡ ನಿಯಂತ್ರಿಸಲು ತುರ್ತು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಯಿತು. ಬೆಳಗಾವಿ ತಾಲೂಕು ಆರೋಗ್ಯಾಧಿಕಾರಿ ಮಾಸ್ತಿಹೊಳಿ, ಸಿಪಿಐ ಶ್ರೀನಿವಾಸ ಹಾಂಡ, ಜಿಲ್ಲಾಧಿಕಾರಿ ಕಚೇರಿಯ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣತ ನಿಂಗನಗೌಡ ಚನಬಸನಗೌಡರ, ಭಾರತ ಪೆಟ್ರೋಲಿಯಂ ಟೆರಿಟರಿ ಮ್ಯಾನೇಜರ್ ಸುರೇಶ ಅಲಾಟೆ, ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ ಶಶಿಧರ ನೀಲಗಾರ, ಕಿರಣ ನಾಯಕ್, ಶಿವಕುಮಾರ, ಶಾಂತಿಲಾಲ ಜಟಿಯಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts