More

    ಅಶೋಕಪುರಂ ರೈಲ್ವೆ ನಿಲ್ದಾಣದ ಅಭಿವೃದ್ಧಿ ಕಾಮಗಾರಿ ವೀಕ್ಷಿಸಿದ ಪ್ರತಾಪ್ ಸಿಂಹ

    ಮೈಸೂರು: ನಗರದ ಅಶೋಕಪುರಂ ರೈಲ್ವೆ ನಿಲ್ದಾಣಕ್ಕೆ ಶುಕ್ರವಾರ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿಸಿದರು.

    ನಗರದ ರೈಲ್ವೆ ನಿಲ್ದಾಣದ ಮೇಲಿನ ಒತ್ತಡ ಕಡಿಮೆ ಮಾಡುವ ಸಲುವಾಗಿ ಅಶೋಕಪುರಂ ನಿಲ್ದಾಣವನ್ನು ನಗರದ ಎರಡನೇ ರೈಲ್ವೇ ನಿಲ್ದಾಣವನ್ನಾಗಿ 30 ಕೋಟಿ ರೂ.ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಈ ನಿಲ್ದಾಣದಲ್ಲಿ ಎರಡು ಸ್ಟೇಬಲಿಂಗ್ ಲೈನ್, ಎರಡು ಪಿಟ್‌ಲೈನ್ ಹಾಗೂ ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಗೊಳ್ಳುತ್ತಿದೆ.

    ನಗರದ ಮುಖ್ಯ ರೈಲ್ವೆ ನಿಲ್ದಾಣದಲ್ಲಿ ಜಾಗದ ಕೊರತೆಯಿಂದ ಹೆಚ್ಚು ರೈಲುಗಳ ನಿಲುಗಡೆ ಸಾಧ್ಯವಿಲ್ಲ. ಹೀಗಾಗಿ ಅಶೋಕಪುರಂನಲ್ಲಿ ರೈಲುಗಳ ನಿಲುಗಡೆಗೆ ಅವಕಾಶ ಮಾಡಿಕೊಡಲಾಗುತ್ತಿದ್ದು, ಇದರಿಂದ ನಗರದ ಮುಖ್ಯ ರೈಲ್ವೆ ನಿಲ್ದಾಣದ ಮೇಲಿನ ಒತ್ತಡ ಕಡಿಮೆಯಾಗಲಿದೆ. ಮುಂದಿನ ದಿನಗಳಲ್ಲಿ ಪ್ಯಾಸೆಂಜರ್ ರೈಲುಗಳು ಅಶೋಕಪುರಂ ರೈಲು ನಿಲ್ದಾಣದಿಂದಲೇ ಸಂಚಾರ ಆರಂಭಿಸಲು ಚಿಂತನೆ ನಡೆಸಲಾಗುತ್ತಿದೆ. ದ್ವಿಚಕ್ರ ವಾಹನಗಳ ನಿಲುಗಡೆಗೆ ಪಾರ್ಕಿಂಗ್ ನಿರ್ಮಾಣ ಮಾಡಲಾಗುತ್ತಿದೆ.

    ಈ ಸಂದರ್ಭ ಮಾತನಾಡಿದ ಪ್ರತಾಪ್ ಸಿಂಹ, ನಗರದ ಮುಖ್ಯ ರೈಲ್ವೆ ನಿಲ್ದಾಣವನ್ನು ಉನ್ನತೀಕರಿಸಲು ಕ್ರಮ ವಹಿಸಲಾಗುತ್ತಿದ್ದು, 4 ಹೊಸ ಸ್ಟೇಬಲಿಂಗ್ ಲೈನ್‌ಗಳು, 4 ಪಿಟ್‌ಲೈನ್‌ಗಳು, 2 ಹೊಸ ಪ್ಲಾಟ್‌ಫಾರ್ಮ್‌ಗಳನ್ನು ನಿರ್ಮಾಣ ಮಾಡಲು ಟೆಂಡರ್ ಕರೆಯಲಾಗಿದೆ ಎಂದು ಹೇಳಿದರು.

    ಈ ಸಂದರ್ಭ ಶಾಸಕ ಟಿ.ಎಸ್. ಶ್ರೀವತ್ಸ, ನಗರ ಪಾಲಿಕೆ ಸದಸ್ಯ ಬಿ.ವಿ.ಮಂಜುನಾಥ್, ರೈಲ್ವೆಯ ಹಿರಿಯ ಅಧಿಕಾರಿ ರವಿಚಂದ್ರನ್ ಹಾಗೂ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts