More

    ಅಸಮಾನತೆ ವಿರುದ್ಧ ಹೋರಾಡಿದ್ದ ಅಪ್ರತಿಮ ನಾಯಕ

    ಪಿರಿಯಾಪಟ್ಟಣ: ಸಮಾಜದಲ್ಲಿನ ಅಸಮಾನತೆ ವಿರುದ್ಧ ಹೋರಾಟ ಮಾಡಿದ ಅಪ್ರತಿಮ ನಾಯಕ ಡಾ.ಬಾಬು ಜಗಜೀವನ ರಾಮ್‌ಎಂದು ತಹಸೀಲ್ದಾರ್ ಕುಂಜಿ ಅಹಮದ್ ಅಭಿಪ್ರಾಯಪಟ್ಟರು.

    ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿಸಿದ್ದ ಡಾ.ಬಾಬು ಜಗಜೀವನ ರಾಮ್ ಅವರ 116ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಬಾಬೂಜಿ ಅವರು ತಮ್ಮ ಆಡಳಿತದ ಅವಧಿಯಲ್ಲಿ ದೇಶದಲ್ಲಿದ್ದ ಆಹಾರ ಸಮಸ್ಯೆಯನ್ನು ನೀಗಿಸಿ ಹಸಿರು ಕ್ರಾಂತಿಯ ಹರಿಕಾರರಾಗಿದ್ದಾರೆ ಎಂದು ತಿಳಿಸಿದರು.
    ಜಾತಿಗಳ ಹೆಸರಿನಲ್ಲಿ ನಮ್ಮ ಹಕ್ಕುಗಳನ್ನು ಪ್ರತಿಪಾದನೆ ಮಾಡುವುದು ಸರಿಯಲ್ಲ. ನಾವೆಲ್ಲ ಒಂದೇ ಎಂಬ ಮನೋಭಾವ ಬೆಳೆಸಿಕೊಳ್ಳದೆ ಹೋದರೆ ಜೀವನದಲ್ಲಿ ತಪ್ಪು ಹೆಜ್ಜೆ ಇಡಬೇಕಾಗುತ್ತದೆ ಎಂಬುದು ಡಾ.ಬಾಬು ಜಗಜೀವನ ರಾಮ್ ಅವರ ಪ್ರತಿಪಾದನೆಯಾಗಿತ್ತು ಎಂದರು.

    ಡಾ.ಬಾಬು ಜಗಜೀವನ ರಾಮ್ ಅವರು ಕೇಂದ್ರ ಸಚಿವರಾಗಿ ಹಲವು ಖಾತೆಗಳನ್ನು ನಿಭಾಯಿಸುವ ಮೂಲಕ ಶೋಷಿತರು, ಹಿಂದುಳಿದವರ ಪರ ಕರ್ತವ್ಯ ನಿರ್ವಹಿಸಿ ಅಜರಾಮರವಾಗಿದ್ದಾರೆ. ಅವರ ಆದರ್ಶ ತತ್ವಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದರು.

    ತಾಪಂ ಇಒ ಸಿ.ಆರ್. ಕೃಷ್ಣಕುಮಾರ್ ಮಾತನಾಡಿ, ಡಾ.ಬಾಬು ಜಗಜೀವನ ರಾಮ್ ಅವರು ವಿದ್ಯಾರ್ಥಿ ಜೀವನದಿಂದಲೇ ಕ್ರಾಂತಿಕಾರಿ ಗುಣಗಳನ್ನು ಬೆಳೆಸಿಕೊಂಡಿದ್ದರು. ಶಾಲೆಯಲ್ಲಿದ್ದ ಅಸ್ಪಶ್ಯತೆ ಆಚರಣೆ ವಿರುದ್ಧ ಸಿಡಿದೆದ್ದು ಸಾಮಾಜಿಕ ಬದಲಾವಣೆಗೆ ಮುನ್ನುಡಿ ಬರೆದಿದ್ದರು. ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರ ಬೋಸ್ ಹಾಗೂ ಜವಾಹರ್ ಲಾಲ್ ನೆಹರು ಅವರಂತಹ ಮಹನೀಯರು ಇವರಿಗೆ ಉನ್ನತ ಸ್ಥಾನಮಾನ ನೀಡಿ ಗೌರವಿಸಿದ್ದಾರೆ. ಇಂತಹ ಮಹನೀಯರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು.

    ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಿದ್ದೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜು, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್, ಪಶು ಪಾಲನ ಇಲಾಖೆ ಸಹಾಯಕ ನಿರ್ದೇಶಕ ಸೋಮಯ್ಯ, ಪುರಸಭೆ ಮುಖ್ಯಾಧಿಕಾರಿ ಮುತ್ತಪ್ಪ, ಭೂ ಮಾಪನ ಇಲಾಖೆ ಸಹಾಯಕ ನಿರ್ದೇಶಕ ಮುನಿಯಪ್ಪ, ಉಪ ನೋಂದಾಧಿಕಾರಿ ಮಧು, ಮುಖಂಡರಾದ ಸೀಗೂರು ವಿಜಯಕುಮಾರ್, ಆರ್.ಎಸ್. ದೊಡ್ಡಣ್ಣ, ಜಗದೀಶ್, ಶಿವಣ್ಣ, ಮಾದೇವ್, ಬಸವರಾಜ್, ರವಿ, ಜಯಣ್ಣ, ಪಿ.ಮಹದೇವ್, ಗಿರೀಶ್, ಕಾಮರಾಜ್, ರಾಜಯ್ಯ, ಸಣ್ಣಪ್ಪ , ಶಿವಕುಮಾರ್, ನಾಗರಾಜು, ಪುಟ್ಟಯ್ಯ, ಚಲುವಯ್ಯ, ರಮಣಯ್ಯ, ನಟರಾಜ್ ಮತಿತ್ತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts