More

    ಅಸಹಾಯಕತೆ ಮುಚ್ಚಿಕೊಳ್ಳಲು ಬಿಜೆಪಿ ಪ್ರತಿಭಟನೆ : ಶರಣು ಮೋದಿ ತಿರುಗೇಟು

    ಕೇಸರಿಪಡೆ ನಾಯಕರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶರಣಕುಮಾರ ಮೋದಿ ವಾಗ್ದಾಳಿ

    ವಿಜಯವಾಣಿ ಸುದ್ದಿಜಾಲ ಕಲಬುರಗಿ
    ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೇತೃತ್ವದ ಸರ್ಕಾರ ಜನಪರ ಆಡಳಿತ ನೀಡುತ್ತಿರುವುದು ಬಿಜೆಪಿಗೆ ಸಹಿಸಿಕೊಳ್ಳಲಾಗದಂತಹ ಸಂಕಟ ತಂದಿಟ್ಟಿದ್ದರಿAದಲೇ ರಾಜ್ಯಾದ್ಯಂತ ಪ್ರತಿಭಟನೆ ಕೈಗೊಳ್ಳುವ ಮೂಲಕ ಬಿಜೆಪಿ ತನ್ನ ಅಸಹಾಯಕತೆ ಪ್ರದರ್ಶಿಸಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶರಣಕುಮಾರ ಮೋದಿ ತಿರುಗೇಟು ನೀಡಿದ್ದಾರೆ.
    ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿAದ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿz್ದÁರೆ.  ಎಲ್ಲಿಯೂ ಸಣ್ಣ ಅಹಿತಕರ ಘಟನೆಯೂ ನಡೆಯದಂತೆ ಕಾನೂನು-ಸುವ್ಯವಸ್ಥೆ ಬಿಗಿಗೊಳಿಸಲಾಗಿದೆ. ಹೀಗಿದ್ದರೂ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎನ್ನುತ್ತಿರುವ ಬಿಜೆಪಿ ಮುಖಂಡರ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ತಿಳಿಸಿದ್ದಾರೆ.
    ರೈತರು ಆತ್ಮಹತ್ಯೆ ಕುರಿತು ಸುಳ್ಳು  ವದಂತಿ ಹಬ್ಬಿಸುವ ಮೂಲಕ ಬಿಜೆಪಿ ಮುಖಂಡರು ರಾಜ್ಯದ ಜನರನ್ನು ದಿಕ್ಕು ತಪ್ಪಿಸುವ ಯತ್ನ ಮಾಡುತ್ತಿz್ದÁರೆ. ವಿಧಾನ ಮಂಡಲದ ಘನತೆಗೆ ಧಕ್ಕೆ ತಂದಿರುವ ಬಿಜೆಪಿಯ  ೧೦ ಶಾಸಕರನ್ನು ಈ ಅಧಿವೇಶನದಿಂದ ಅಮಾನತುಗೊಳಿಸಿರುವ ಸ್ಪೀಕರï ಯು.ಟಿ.ಖಾದರ್ ಕ್ರಮ ಸ್ವಾಗತಾರ್ಹವಾಗಿದೆ. ಶಾಸಕರು ತಾವು ಪ್ರತಿನಿಧಿಸುವ ಕ್ಷೇತ್ರಗಳ ಜನರ ಆಶಯ, ಒತ್ತಾಸೆ ಎತ್ತಿ ಹಿಡಿಯುವ ಕೆಲಸ ಮಾಡುವುದು ಬಿಟ್ಟು ಸದನದ ಗೌರವಕ್ಕೆ ಧಕ್ಕೆ ತಂದಿದ್ದರಿAದ ಸಸ್ಪೆಂಡ್ ಮಾಡಿದ್ದರು ಎಂದು ಮೋದಿ ಸಮರ್ಥಿಸಿಕೊಂಡಿದ್ದಾರೆ.
    ಈ ಹಿಂದೆ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಅನುಸರಿಸಿದ ಜನವಿರೋಧಿ ನೀತಿಗಳಿಂದಾಗಿ ಜನರು ಬೇಸತ್ತು ಕಾಂಗ್ರೆಸ್ ಪಕ್ಷ ಕ್ಕೆ  ಅಧಿಕಾರ ನೀಡಿದ್ದಾರೆ. ಚುನಾವಣೆ ಹೊತ್ತಿನಲ್ಲಿ ಪಕ್ಷದ ನಾಯಕರು ಕೊಟ್ಟ ಗ್ಯಾರಂಟಿ ಭರವಸೆಗಳನ್ನು ಸಿಎಂ ಮತ್ತು ಡಿಸಿಎಂ ಸೇರಿಕೊಂಡು ಈಡೇರಿಸಿ, ಜಾರಿಗೊಳಿಸಿದ್ದು ಕೇಸರಿಪಡೆಗೆ ಬಿಸಿತುಪ್ಪವಾಗಿದೆ. ಹೀಗಾಗಿ ಇಲ್ಲದ ಸುಳ್ಳು ಹೇಳಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಹೇಳಿಕೆಯಲ್ಲಿ ಕಿಡಿಕಾರಿದ್ದಾರೆ.ಪ್ರತಿಪಕ್ಷದ ನಾಯಕನನ್ನು ಆಯ್ಕೆ ಮಾಡದ ಅಸಹಾಯಕತೆ ಮುಚ್ಚಿಕೊಳ್ಳಲು ಬಿಜೆಪಿ ಶಾಸಕರು ಸಭಾಧ್ಯಕ್ಷರ ವಿರುದ್ಧ ಧರಣಿ ಮಾಡಿ ನಾಡಿನ ಜನರ ದೃಷ್ಟಿಯಲ್ಲಿ ಸಾಚಾ ಎನಿಸಿಕೊಳ್ಳಲು ಹೊರಟಿದ್ದಾರೆ ಎಂದು ಶರಣಕುಮಾರ ಮೋದಿ ತಿರುಗೇಟು ನೀಡಿದ್ದಾರೆ.
    ದಿನಬಳಕೆಯ ವಸ್ತುಗಳ ಬೆಲೆ ಏರಿಕೆಗೆ ರಾಜ್ಯ ಸÀರ್ಕಾರವೇ ಹೊಣೆ ಎನ್ನುವಂತೆ ಬಿಂಬಿಸುವ ಯತ್ನ  ಬಿಜೆಪಿ ಮಾಡುತ್ತಿದ್ದು, ಬೆಲೆ ಏರಿಕೆಯ ಸಂಪೂರ್ಣ ಶ್ರೇಯಸ್ಸು ಬಿಜೆಪಿಗೆ ಸಲ್ಲುತ್ತದೆ.ಅದರಿಂದಾಗಿಯೇ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿದೆ ಎಂಬುದನ್ನು ಮರೆತಿರುವಂತಿದೆ ಎಂದು ವ್ಯಂಗ್ಯವಾಡಿದ್ದಾರೆ.
    ಕಲಬುರಗಿ ಜಿ¯್ಲೆಯೂ ಸೇರಿದಂತೆ ಇಡೀ ರಾಜ್ಯದಲ್ಲಿ ಬಿಜೆಪಿ ಮುಖಂಡರಲ್ಲಿ ಒಗ್ಗಟ್ಟು ಇಲ್ಲ ಎಂಬುದು ಈಗಾಗಲೇ ಹಲವು ಸಂದರ್ಭಗಳಲ್ಲಿ ಬಹಿರಂಗಗೊAಡಿದೆ. ಶನಿವಾರ ಕಲಬುರಗಿ ನಗರದಲ್ಲಿ ಸರ್ಕಾರ ವಿರುದ್ಧ ಬಿಜೆಪಿ ಮುಖಂಡರು ಕೈಗೊಂಡ ಪ್ರತಿಭಟನೆಯಲ್ಲೂ ಒಗ್ಗಟ್ಟಿನ ಕೊರತೆ ಮತ್ತೊಮ್ಮೆ ಸಾಬೀತಾಗಿದೆ.  ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆಯನ್ನೇ ಬಿಜೆಪಿ ನಾಯಕರು ಕಳೆದುಕೊಂಡಿದ್ದಾರೆ ಎಂದು ಮೋದಿ ತಿಳಿಸಿದ್ದಾರೆ.
    ===

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts