More

    ಅಸ್ತಿತ್ವಕ್ಕಾಗಿ ಕಾಂಗ್ರೆಸ್ ಹೋರಾಟ

    ಹಿರೇಕೆರೂರ: ಕಾಂಗ್ರೆಸ್ ಸದ್ಯದ ಪರಿಸ್ಥಿತಿಯಲ್ಲಿ ಸಂಪೂರ್ಣ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಅದನ್ನು ಉಳಿಸಿಕೊಳ್ಳಲು ಈಗ ಬಿಜೆಪಿ ಸರ್ಕಾರ ಜಾರಿಗೆ ತಂದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮುಂದಿಟ್ಟುಕೊಂಡು ಹೋರಾಟ ಮಾಡುತ್ತಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಟೀಕಿಸಿದರು.

    ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹೇಳುವುದು ಒಂದು, ಮಾಡುವುದು ಇನ್ನೊಂದು. 2019ರ ಪ್ರಣಾಳಿಕೆಯಲ್ಲಿ ಎಪಿಎಂಎಂಸಿ ಕಾಯ್ದೆ ತಿದ್ದುಪಡಿ ಮಾಡುವ ಕುರಿತು ಕಾಂಗ್ರೆಸ್ ಸ್ಪಷ್ಟವಾಗಿ ಹೇಳಿತ್ತು. ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಆರ್.ವಿ. ದೇಶಪಾಂಡೆ, ಮಲ್ಲಿಕಾರ್ಜುನ ಖರ್ಗೆ ಅವರೇ ಬೆಂಬಲಿಸಿದ್ದರು. ಈಗ ಅವರು ಹೇಳಿದಂತೆಯೇ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಣ್ಣ ರೈತನಿಗೂ ಅನುಕೂಲವಾಗುವಂತೆ ಕೃಷಿ ಕಾಯ್ದೆ ಜಾರಿಗೊಳಿಸಿದ್ದಾರೆ. ವಿನಾಕಾರಣ ಇದನ್ನು ಕಾಂಗ್ರೆಸ್ ವಿರೋಧಿಸುತ್ತಿದೆ. ಭೂಸುಧಾರಣೆ ಕಾಯ್ದೆ ತಿದ್ದುಪಡಿಯಿಂದ ರಾಜ್ಯದಲ್ಲಿ ಪಾಳು ಬಿದ್ದ 30ರಿಂದ 40,000 ಹೆಕ್ಟೇರ್ ಭೂಮಿಯಲ್ಲಿ ಕೃಷಿ ಚಟುವಟಿಕೆ ನಡೆಸಲು, ಕೃಷಿಗೆ ಉತ್ತೇಜನ ನೀಡಲು, ಯುವಕರಿಗೆ ಉದ್ಯೋಗ ಅವಕಾಶಗಳು ಹೆಚ್ಚಾಗಲಿವೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts