More

    ಅ.22, 23 ಪಂಡಿತರತ್ನ ಕೆ.ಎಸ್.ವರದಾಚಾರ್ಯ ಶತಮಾನೋತ್ಸವ

    ಮೈಸೂರು: ಪಂಡಿತರತ್ನ ಕೆ.ಎಸ್.ವರದಾಚಾರ್ಯ ಶತಮಾನೋತ್ಸವ ಸಮಿತಿ ನೇತೃತ್ವದಲ್ಲಿ ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಸಹಯೋಗದೊಂದಿಗೆ ಅ.22 ಮತ್ತು 23ರಂದು ನಗರದಲ್ಲಿ ಕೆ.ಎಸ್.ವರದಾಚಾರ್ಯ ಶತಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್ ತಿಳಿಸಿದರು.
    ಕೃಷ್ಣಮೂರ್ತಿಪುರಂನ ಶಾರದಾ ವಿಲಾಸ ಶತಮಾನೋತ್ಸವ ಭವನದಲ್ಲಿ ಆಯೋಜಿಸಿರುವ ಎರಡು ದಿನಗಳ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಧಮೇಂದ್ರ ಪ್ರಧಾನ್ ಚಾಲನೆ ನೀಡಲಿದ್ದಾರೆ. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ಎಸ್.ಟಿ.ಸೋಮಶೇಖರ್, ಕರ್ನಾಟಕ ಸಂಸ್ಕೃತ ವಿವಿ ಕುಲಪತಿ ಡಾ.ಕೆ.ಇ.ದೇವನಾಥನ್ ಇತರರು ಭಾಗವಹಿಸುವರು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಶ್ರೀಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ, ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಶ್ರೀಮದಭಿನವ ವಾಗೀಶ ಬ್ರಹ್ಮತಂತ್ರ ಸ್ವತಂತ್ರ ಪರಕಾಲ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಉದ್ಘಾಟನೆ ಬಳಿಕ ಸಾಧಕರ ಸನ್ಮಾನ, ವಿಚಾರಗೋಷ್ಠಿ ಆಯೋಜಿಸಲಾಗಿದೆ. ಅ.23ರಂದು ವಿಚಾರಗೋಷ್ಠಿ, ಸಂಸ್ಮರಣ ಗ್ರಂಥ ಬಿಡುಗಡೆ, ವಿಚಾರಸಂಕಿರಣ, ಗುರುವಂದನೆ, ಮಧ್ಯಾಹ್ನ 3ಕ್ಕೆ ಸಮಾರೋಪ ಸಮಾರಂಭ ಇರಲಿದೆೆ ಎಂದು ತಿಳಿಸಿದರು.
    ವರದಾಚಾರ್ಯರು ದಾರ್ಶನಿಕರಾಗಿದ್ದು, ವಿವಿಧತೆಯಲ್ಲಿ ಏಕತೆ ಎಂಬಂತೆ ಎಲ್ಲರನ್ನೂ ಪ್ರೀತಿಸುತ್ತಿದ್ದರು. ಹೀಗಾಗಿ ಇವರಿಗೆ ಎಲ್ಲ ಸಮುದಾಯದ ಶಿಷ್ಯ ವೃಂದವಿದೆ. ವರದಾಚಾರ್ಯರು ಈ ಶತಮಾನಕಂಡ ಅದ್ಭುತ ಜ್ಞಾನಿಯಾಗಿದ್ದರು. ಸಮಾಜದ ಎಲ್ಲ ಧರ್ಮಗಳ ಸಮನ್ವಯತೆಗಾಗಿ ಸಾಕಷ್ಟು ಶ್ರಮಿಸಿದವರು. ಅಂತಹ ವ್ಯಕ್ತಿಯನ್ನು ಸ್ಮರಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.
    ಆಯೋಜಕರಾದ ಇಳೈ ಆಳ್ವಾರ್ ಸ್ವಾಮಿ, ಸತೀಶ್‌ಭಟ್, ಸುಂದರೇಶ್, ಚಕ್ರಪಾಣಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts