More

    ಅ. 28 ರಂದು ಜಿಲ್ಲೆಯಾದ್ಯಂತ ಕೋಟಿ ಕಂಠ ಗಾಯನ

    ಬಾಗಲಕೋಟೆ: ಕನ್ನಡ ರಾಜ್ಯೋತ್ಸವ ಅಂಗವಾಗಿ ಅಕ್ಟೋಬರ 28 ರಂದು ಜಿಲ್ಲೆಯಾದ್ಯಂತ ಆಯ್ದ 17 ಸ್ಥಳಗಳಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ತಿಳಿಸಿದರು.
    ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಕೋಟಿ ಕಂಠ ಗಾಯನ ಕಾರ್ಯಕ್ರಮ ಕುರಿತು ಪೂರ್ವ ಸಿದ್ದತಾ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಳೆದ ವರ್ಷ ಲಕ್ಷ ಕಂಠ ಗಾಯನ ಶಿರ್ಷಿಕೆಯಡಿ ಕಾರ್ಯಕ್ರಮ ಆಯೋಜಿಸಿ ಯಶಸ್ವಿಗೊಳಿಸಿದ ಹಿನ್ನಲೆಯಲ್ಲಿ ಪ್ರಸಕ್ತ ವರ್ಷ ಕೋಟಿ ಕಂಠ ಗಾಯನ ಶಿರ್ಷಿಕೆಯಡಿ ಸರ್ಕಾರದಿಂದ ಕಾರ್ಯಕ್ರಮ ನಡೆಸಲಾಗುತ್ತದೆ. ಕಾರ್ಯಕ್ರಮ ಯಶಸ್ವಿಗೆ ಎಲ್ಲ ರೀತಿಯಲ್ಲಿ ಸಿದ್ದತೆ ಮಾಡಿಕೊಳ್ಳುವಂತೆ ತಾಲೂಕಿನ ತಹಸೀಲ್ದಾರ, ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲಾಡಳಿತ ಭವನ, ಐತಿಹಾಸಿಕ ಸ್ಥಳಗಳಾದ ಬಾದಾಮಿ ಗುಹೆ ಆವರಣ, ಕೂಡಲ ಸಂಗಮ, ಪಟ್ಟದಕಲ್ಲು, ಐಹೊಳೆ, ಜಮಖಂಡಿ ಪೊಲೀ ಆವರಣ, ಮುಧೋಳ ರನ್ನ ಕ್ರೀಡಾಂಗಣ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಸೇರಿದಂತೆ ಒಟ್ಟು 17 ಸ್ಥಳಗಳಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಲಿದೆ. ಇದು ರಾಜ್ಯಾದ್ಯಂತ ಏಕ ಕಾಲದಲ್ಲಿ ನಡೆಯುವ ಕಾರ್ಯಕ್ರಮವಾಗಿದ್ದು, ಅಂದು ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಸಲು ಎಲ್ಲ ರೀತಿಯ ಸಿದ್ದತೆಗಳನ್ನು ಕೈಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಲು ತಿಳಿಸಿದರು.
    ಅಂದು ಜಗರುವ ಕೋಟಿ ಕಂಠ ಗಾಯನದಲ್ಲಿ ನನ್ನ ನಾಡು – ನನ್ನ ಹಾಡು ಸಮೂಹ ಗೀತಗಾಯನದಲ್ಲಿ ಕುವೆಂಪು ವಿರಚಿತ ನಾಡಗೀತೆ, ಹುಯಿಲಗೋಳ ನಾರಾಯಣರಾಯರ ಉದವಾಗಲಿ ನಮ್ಮ ಚೆಲುವ ಕನ್ನಡನಾಡು, ರಾಷ್ಟ್ರ ಕವಿ ಕುವೆಂಪುರವರ ಬಾರಿಸು ಕನ್ನಡ ಡಿಂಡಿಮವ, ಡಾ.ಡಿ.ಎಸ್.ಕರ್ಕಿಯವರ ಹಚ್ಚೇವು ಕನ್ನಡದ ದೀಪ, ನಾಡೋಜ ಡಾ.ಚೆನ್ನವೀರ ಕಣವಿಯವರ ವಿಶ್ವವಿನೂತ ವಿದ್ಯಾಚೇತನ ಹಾಗೂ ಡಾ.ಹಂಸಲೇಖರವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಗೀತೆಗಳನ್ನು ಹಾಡಲಾಗುತ್ತಿದೆ ಎಂದರು.
    ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಬಿರಾದಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಅಕ್ಕಮಹಾದೇವಿ ಕೆ.ಎಚ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರಾಹುಲ್‍ಕುಮಾರ ಬಾವಿದಡ್ಡಿ, ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ಎಂ.ಜಿ.ಕೊಣ್ಣೂರ, ಜಿಲ್ಲಾ ವಾರ್ತಾಧಿಕಾರಿ ಕಸ್ತೂರಿ ಪಾಟೀಲ, ಆರ್.ಎಂ.ಎಸ್‍ನ ಉಪ ಸಮನ್ವಯಾಧಿಕಾರಿ ಜಾಸ್ಮೀನ್ ಕಿಲ್ಲೇದಾರ ಸೇರಿದಂತೆ ಇತರ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts