More

    ಆಂಜನೇಯ ಸ್ವಾಮಿ ರಥೋತ್ಸವ ಅದ್ದೂರಿ

    ಚಿತ್ರದುರ್ಗ: ತಾಲೂಕಿನ ಹುಲ್ಲೂರು ಗ್ರಾಮದಲ್ಲಿ ಸೋಮವಾರ ಆಂಜನೇಯ ಸ್ವಾಮಿ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಜರುಗಿತು.

    ಸ್ವಾಮಿಯ ರಥವನ್ನು ಎಳೆಯುವ ಕ್ಷಣಕ್ಕಾಗಿ ಅನೇಕ ಭಕ್ತರು ಕಾತರದಿಂದ ಕಾಯುತ್ತಿದ್ದರು. ಚಾಲನೆ ದೊರೆಯುತ್ತಿದ್ದ ಆಂಜನೇಯ ಸ್ವಾಮಿ ಕೀ ಜೈ, ಜೈ ಶ್ರೀರಾಮ್, ಜೈ ಜೈ ಶ್ರೀರಾಮ್, ಗೋವಿಂದ, ಗೋವಿಂದ ಎಂದು ಜಯಘೋಷ ಮೊಳಗಿಸಿದರು. ಈ ವೇಳೆ ಭಕ್ತೋತ್ಸಾಹ ಮುಗಿಲುಮುಟ್ಟಿತ್ತು.

    ರಥಕ್ಕೆ ಬಾಳೆಹಣ್ಣನ್ನು ಎಸೆಯುವ ಮೂಲಕ ಭಕ್ತಿ ಸಮರ್ಪಿಸಿದರು. ರಥೋತ್ಸವದ ಅಂಗವಾಗಿ ಸ್ವಾಮಿಗೆ ಮುಂಜಾನೆ ಅಭಿಷೇಕ, ಅಲಂಕಾರ ಸೇವೆ ಸೇರಿ ಇತರೆ ಪೂಜಾ ಕೈಂಕರ್ಯ ಶಾಸ್ತ್ರೋಕ್ತವಾಗಿ ನೆರವೇರಿದವು.

    ರಥೋತ್ಸವಕ್ಕೂ ಮುನ್ನ ದೇಗುಲದಿಂದ ಸ್ವಾಮಿಯ ಉತ್ಸವ ಮೂರ್ತಿಯನ್ನು ಪುಷ್ಪಾಲಂಕೃತ ಪಲ್ಲಕ್ಕಿಯಲ್ಲಿ ಕರೆತಂದು ಪೂಜೆ ಸಲ್ಲಿಸಲಾಯಿತು. ನಂತರ ಮೂರ್ತಿಯನ್ನು ರಥದ ಬಳಿ ಕರೆತಂದು ಪ್ರದಕ್ಷಿಣೆ ಹಾಕಿಸಿ ರಥದಲ್ಲಿ ಪ್ರತಿಷ್ಠಾಪಿಸಲಾಯಿತು.

    ಮುಕ್ತಿಬಾವುಟವನ್ನು ಜಿಪಂ ಕೆಡಿಪಿ ಸದಸ್ಯ ಕೆ.ಸಿ.ನಾಗರಾಜ್ 53ಸಾವಿರ ರೂ.ಗೆ ಹರಾಜಿನಲ್ಲಿ ಪಡೆದರು. ಗ್ರಾಪಂ ಸದಸ್ಯ ರವಿಕುಮಾರ್, ಎನ್.ಕಲ್ಲೇಶ್, ಎಚ್.ಎ.ಮಂಜುನಾಥ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts