More

    ಆಕ್ಸಿಜನ್ ಘಟಕ ಸ್ಥಾಪನೆಗೆ ಕೇಂದ್ರ ಅನುಮೋದನೆ

    ಚಿಕ್ಕೋಡಿ: ಚಿಕ್ಕೋಡಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪನೆಗೆ ಕೇಂದ್ರ ಇಂಧನ ಇಲಾಖೆ ಅನುಮೋದನೆ ನೀಡಿದೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾಹಿತಿ ನೀಡಿದ್ದಾರೆ.

    ಕೇಂದ್ರ ಸರ್ಕಾರವು ರಾಜ್ಯದ 28 ವಿವಿಧ ಆಸ್ಪತ್ರೆಗಳಲ್ಲಿ 38 ಕೋಟಿ ರೂಪಾಯಿ ವೆಚ್ಚದಲ್ಲಿ ಆಕ್ಸಿಜನ್ ಉತ್ಪಾದನಾ ಘಟಕಗಳ ಸ್ಥಾಪನೆಗೆ ಅನುಮೋದನೆ ನೀಡಿದ್ದು ಇದರಲ್ಲಿ ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯೂ ಸೇರಿದೆ. ಈ ಘಟಕವನ್ನು ಸ್ಥಾಪಿಸಲು ಓಎನ್‌ಜಿಸಿಗೆ ಅನುಮತಿ ನೀಡಲಾಗಿದೆ.

    ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ತಲಾ ಒಂದರಂತೆ ಪಿಎಸ್‌ಎ ಮಾದರಿಯಲ್ಲಿ ಉತ್ಪಾದನಾ ಘಟಕಗಳನ್ನು ಸ್ಥಾಪಿಸುವಂತೆ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೆಂದ್ರ ಪ್ರಧಾನ್, ಕಲ್ಲಿದಲು, ಗಣಿ ಇಲಾಖೆ ಸಚಿವ ಪ್ರಲ್ಹಾದ ಜೋಶಿ ರಾಜ್ಯದ ಪರವಾಗಿ ಕೇಂದ್ರ ಸರ್ಕಾರಕ್ಕೆ ಕೋರಿದ್ದರು. ಮನವಿಗೆ ಸ್ಪಂದನೆ ನೀಡಿದ ಕೇಂದ್ರ ಸರ್ಕಾರ ಅನುಮೋದನೆ ನೀಡಿ ಎಂಆರ್‌ಪಿಎಲ್, ಒಎನ್‌ಜಿಸಿ ಹಾಗೂ ಎಂಡಿಸಿ ಕಂಪನಿಗಳಿಗೆ ಕ್ರಮಕ್ಕೆ ಆದೇಶಿಸಿದೆ. ಮೇ.15ರ ಒಳಗಾಗಿ 11 ಘಟಕಗಳನ್ನು ಹಾಗೂ ಜೂನ್ 30ರ ಒಳಗಾಗಿ ಎಲ್ಲ ಘಟಕ ನಿರ್ಮಾಣ ಪೂರ್ಣಗೊಳಿಸಲು ಗಡುವು ನೀಡಲಾಗಿದೆ ಎಂದು ಅಣ್ಣಸಾಹೇಬ ಜೊಲ್ಲೆ ವಿಜಯವಾಣಿಗೆ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts