More

    ಆಗ್ನೇಯ ಶಿಕ್ಷಕರ ಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟ


    ಚಿತ್ರದುರ್ಗ: ವಿಧಾನಪರಿಷತ್ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿ ಜಿಆರ್‌ಜೆ ದಿವ್ಯಾಪ್ರಭು ಅ ವ ರು ಗುರುವಾರ ಬಿಡುಗಡೆ ಮಾಡಿದರು.
    ವಿಧಾನ ಪರಿಷತ್ ಆಗ್ನೇಯ ಶಿಕ್ಷಕರ ಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟಣೆಗೆ ಸಂಬಂಧಿಸಿದಂತೆ ಡಿಸಿ ಕಚೇರಿಯಲ್ಲಿ ಏರ್ಪಡಿಸಿ ದ್ದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಅವರು, ಡಿಸಿ,ಎಸಿ ಹಾಗೂ ತಹಸೀಲ್ದಾರ್ ಕಚೇರಿಗಳಲ್ಲಿ ಪಟ್ಟಿ ಪ್ರಕಟಿಸಲಾಗುತ್ತದೆ ಎಂದರು.
    ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಹಕ್ಕು ಮತ್ತು ಆಕ್ಷೇಪಣೆಗಳಿಗೆ ನ.23ರಿಂದ ಡಿಸೆಂಬರ್ 9ರೊಳಗೆ ಚುನಾವಣಾ ಆಯೋಗದ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಹಾಗೂ ಅರ್ಹರು ಹೆಸರು ನೋಂದಾಯಿಸಲು ಅವಕಾಶವಿದೆ. ಡಿಸೆಂಬರ್ 25ರಂದು ಅರ್ಜಿಗಳನ್ನು ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು. 30ರಂದು ಅಂತಿಮ ಪಟ್ಟಿ ಪ್ರಕಟಿಸಲಾಗುತ್ತದೆ ಎಂದರು.
    ಕರಡು ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ 3003 ಪುರುಷರು, 1268 ಮಹಿಳೆಯರು ಸೇರಿ 4271 ಮತದಾರರು ಇದ್ದಾರೆ. ಮೊ ಳಕಾಲ್ಲೂರು ತಾಲೂಕಿನಲ್ಲಿ 244, ಚಳ್ಳಕರೆ 828, ಚಿತ್ರದುರ್ಗ 1421, ಹಿರಿಯೂರು 759, ಹೊಸದುರ್ಗ 628 ಹಾಗೂ ಹೊಳಲ್ಕೆರೆ ತಾ ಲೂಕಲ್ಲಿ 391 ಮತದಾರರು ಇದ್ದಾರೆ ಎಂದು ಡಿಸಿ ತಿಳಿಸಿದರು.
    ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಕಳೆದ ಬಾರಿ ಜಿಲ್ಲೆಯಲ್ಲಿ 3650 ಶಿಕ್ಷಕ ಮತದಾರರು ಇದ್ದರು. ಈ ಬಾರಿ ಅವರ ಸಂಖ್ಯೆ 4271ಕ್ಕೆ ಏರಿದೆ ಎಂದರು. 2020ನೇ ಸಾಲಿನಿಂದ ಈಚೆಗೆ ನಿವೃತ್ತಿ ಹೊಂದಿದ ಸಹ ಶಿಕ್ಷಕರು ಪಟ್ಟಿಗೆ ಹೆಸರು ಸೇರಿಸಲು ಅರ್ಹರಿರುತ್ತಾರೆ ಎಂದರು.
    ಉಪವಿಭಾಗಾಧಿಕಾರಿ ಎಂ.ಕಾರ್ತೀಕ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಬಿಜೆಪಿ ಜಿಲ್ಲಾ ಕಾರ್ಯ ಕಾರಿಣಿ ಸದಸ್ಯ ಟಿ.ಯಶವಂತ್‌ಕುಮಾರ್, ಜೆಡಿಎಸ್ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ನಾಯಕ, ಬಿಎಸ್‌ಪಿ ತಾಲೂಕು ಘಟಕದ ಉಪಾಧ್ಯಕ್ಷೆ ಲಕ್ಷ್ಮಮ್ಮ, ಚುನಾವಣಾ ಶಾಖೆ ಶಿರೇಸ್ತೆದಾರ್ ಮಲ್ಲಿಕಾರ್ಜುನ್ ಮತ್ತಿತರರು ಇದ್ದರು.

    (ಸಿಟಿಡಿ ವೋಟ್-ಡಿಸಿ)
    ವಿಧಾನ ಪರಿಷತ್ ಆಗ್ನೇಯ ಶಿಕ್ಷಕರ ಕ್ಷೇತ್ರದ ಕರಡು ಮತದಾರರ ಪಟ್ಟಿ ಚಿತ್ರದುರ್ಗದಲ್ಲಿ ಗುರುವಾರ ಡಿಸಿ ಜಿಆರ್‌ಜೆ ದಿವ್ಯಾಪ್ರಭು ಅವರು ಬಿಡುಗಡೆ ಮಾಡಿದರು. ಎಡಿಸಿ ಬಿ.ಟಿ.ಕುಮಾರಸ್ವಾಮಿ, ಎಸಿ ಎಂ.ಕಾರ್ತಿಕ್, ಡಿ.ಎನ್.ಮೈಲಾರಪ್ಪ, ಟಿ.ಯಶವಂತ್‌ಕುಮಾರ್, ಗೋಪಾಲಸ್ವಾಮಿ ನಾಯಕ, ಲಕ್ಷ್ಮಮ್ಮ, ಮಲ್ಲಿಕಾರ್ಜುನ್ ಮತ್ತಿತರರು ಇದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts