More

    ಆದಿಚುಂಚನಗಿರಿಯಲ್ಲಿ ರಾಹುಲ್ ಗಾಂಧಿ ವಾಸ್ತವ್ಯ


    ನಾಗಮಂಗಲ: ಕಾಂಗ್ರೆಸ್ ವತಿಯಿಂದ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ತಾಲೂಕಿನ ಯಾತ್ರಾ ಸ್ಥಳ ಆದಿಚುಂಚನಗಿರಿ ಮೂಲಕ ಸಾಗುತ್ತಿರುವುದರಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುರುವಾರ ಶ್ರೀಕ್ಷೇತ್ರಕ್ಕೆ ಭೇಟಿ ನೀಡಿ ಪೂರ್ವ ಸಿದ್ಧತೆಯನ್ನು ಪರಿಶೀಲಿಸಿದರು.

    ಪಾಂಡವಪುರ ಮಾರ್ಗವಾಗಿ ಆಗಮಿಸಲಿರುವ ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ನಾಗಮಂಗಲ ಪಟ್ಟಣದ ಮೂಲಕ ಬೆಳ್ಳೂರು ಕ್ರಾಸ್ ಹಾಗೂ ಬೆಳ್ಳೂರು ಮಾರ್ಗವಾಗಿ ಆದಿಚುಂಚನಗಿರಿಯನ್ನು ತಲುಪಲಿದೆ. ಆದಿಚುಂಚನಗಿರಿ ಮಠದ ಆವರಣದಲ್ಲಿರುವ ಬಿಜಿಎಸ್ ಸ್ಟೇಡಿಯಂನಲ್ಲಿ ಅ.7ರಂದು ರಾತ್ರಿ ರಾಹುಲ್ ಗಾಂಧಿ ವಾಸ್ತವ್ಯ ಹೂಡಲಿದ್ದಾರೆ. ನಂತರ ತುಮಕೂರು ಜಿಲ್ಲೆಗೆ ಪಾದಯಾತ್ರೆ ಮುಂದುವರಿಯಲಿದೆ. ಈ ಹಿನ್ನೆಲೆಯಲ್ಲಿ ಸ್ಟೇಡಿಯಂನಲ್ಲಿ ವಾಸ್ತವ್ಯದ ಜಾಗ, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಮುಂತಾದ ಸೌಲಭ್ಯಗಳ ಕುರಿತು ಡಿಕೆಶಿ ಪರಿಶೀಲಿಸಿದರು.

    ಬಳಿಕ ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಡಿಕೆಶಿ, ಕೆಲಕಾಲ ಚರ್ಚಿಸಿದರು. ಮಾಜಿ ಸಚಿವ ಎನ್.ಚಲುವರಾಯಸ್ವಾಮಿ, ಮಾಜಿ ಶಾಸಕ ರಮೇಶ್‌ಬಾಬು ಬಂಡಿಸಿದ್ದೇಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್, ಮುಖಂಡರಾದ ಬೆಮೆಲ್ ಕಾಂತರಾಜು, ಸುನೀಲ್‌ಲಕ್ಷ್ಮೀ ಕಾಂತ್, ಎಚ್.ಟಿ.ಕೃಷ್ಣೇಗೌಡ, ಚೇತನ್ ಮತ್ತಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts