More

    ಆದ್ಯತೆ ಮೇಲೆ ಬೇಡಿಕೆಗಳ ಈಡೇರಿಕೆ -ಸಚಿವ ಮಧು ಬಂಗಾರಪ್ಪ ಭರವಸೆ -ಬಿಸಿಯೂಟ ತಯಾರಕರ ಫೆಡರೇಷನ್ ಜತೆ ಚರ್ಚೆ 

    ದಾವಣಗೆರೆ: ಬಿಸಿಯೂಟ ತಯಾರಕರ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಪರಿಶೀಲಿಸಿ ಈಡೇರಿಸುವುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.
    ಬೆಂಗಳೂರಿನ ಶಿಕ್ಷಣ ಕಚೇರಿಯಲ್ಲಿ ಎಐಟಿಯುಸಿ ಸಂಯೋಜಿತ ಅಕ್ಷರದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ರಾಜ್ಯ ಸಮಿತಿ ಪದಾಧಿಕಾರಿಗಳೊಂದಿಗೆ ಶುಕ್ರವಾರ ಆಯೋಜಿಸಿದ್ದ ಸಭೆಯಲ್ಲಿ ಬಿಸಿಯೂಟ ತಯಾರಕರ ಬೇಡಿಕೆಗಳ ಕುರಿತಂತೆ ಚರ್ಚಿಸಿದ ಬಳಿಕ ಈ ಭರವಸೆ ನೀಡಿದರು.
    ಮುಖ್ಯಶಿಕ್ಷಕರು ಮತ್ತು ಎಸ್‌ಡಿಎಂಸಿ ಅಧ್ಯಕ್ಷರ ಬ್ಯಾಂಕ್ ಜಂಟಿ ಖಾತೆ ಮಾಡಿಸುವ ಸಂಬಂಧ ಶಿಕ್ಷಣ ಇಲಾಖೆ ಆಯುಕ್ತರು ಹೊರಡಿಸಿದ ಆದೇಶ ರದ್ದುಪಡಿಸಬೇಕು. ಹಿಂದಿನಂತೆಯೇ ಅಡುಗೆಯವರು ಮತ್ತು ಮುಖ್ಯಶಿಕ್ಷಕರ ಜಂಟಿ ಖಾತೆಯನ್ನು ಮುಂದುವರಿಸಬೇಕೆಂದು ಸಭೆಯಲ್ಲಿ ಆಗ್ರಹಿಸಲಾಯಿತು.
    ನಿವೃತ್ತಿಯಾದ ಬಿಸಿಯೂಟ ತಯಾರಕರಿಗೆ ಇಡುಗಂಟು ಹಣ ಕೊಡುವುದು ಸೇರಿದಂತೆ ಹಿಂದಿನ ಬಜೆಟ್‌ನಲ್ಲಿ ಸರ್ಕಾರ ಘೋಷಿಸಿದಂತೆ ಒಂದು ಸಾವಿರ ರೂ.ಗಳನ್ನು ಜೂನ್‌ನಿಂದಲೇ ನೀಡಬೇಕೆಂದು ಸಚಿವರ ಗಮನಕ್ಕೆ ತರಲಾಯಿತು.
    ಶಿಕ್ಷಣ ಇಲಾಖೆ ಆಯುಕ್ತರು, ಮಧ್ಯಾಹ್ನ ಉಪಹಾರ ಯೋಜನೆ ಸಹಾಯಕ ನಿರ್ದೇಶಕರಿದ್ದ ಸಭೆಯಲ್ಲಿ ಬಿಸಿಯೂಟ ತಯಾರಕರ ಫೆಡರೇಷನ್‌ನ ರಾಜ್ಯಾಧ್ಯಕ್ಷ ಹೊನ್ನಪ್ಪ ಮರೆಮ್ಮನವರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಆವರಗೆರೆ ಚಂದ್ರು, ರಾಜ್ಯ ಖಜಾಂಚಿ ರುದ್ರಮ್ಮ ಬೆಳಲಗೆರೆ, ಮುಖಂಡರಾದ ಸೋಮರಾಜ ಅರಸ್, ಪುಷ್ಪಲತಾ, ಉಮಾದೇವಿ, ಕಲ್ಪನಾ , ನಿರ್ಮಲಾ, ಸಾಕಮ್ಮ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts