More

    ಆಧುನಿಕ ಜೀವನಕ್ಕೆ ವಿದ್ಯುತ್ ಅಗತ್ಯ ಬಹಳಷ್ಟಿದೆ

    ಬೀದರ್: ಮನುಷ್ಯನ ಆಧುನಿಕ ಜೀವನಕ್ಕೆ ನೀರು, ಆಹಾರದಷ್ಟೇ ವಿದ್ಯುತ್ ಅಗತ್ಯ ಬಹಳಷ್ಟಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದರು.

    ಜಿಲ್ಲಾಡಳಿತ, ಜಿಪಂ ಸಹಯೋಗದಡಿ ಪೂಜ್ಯ ಡಾ.ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಉಜ್ಜಲ ಭಾರತ, ಉಜ್ವಲ ಭವಿಷ್ಯ ವಿದ್ಯುತ್ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಅವರು, ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಸಿಗದಿದ್ದರೆ ಆ ಕ್ಷೇತ್ರ ಅಭಿವೃದ್ಧಿ ಆಗುವುದಿಲ್ಲ, ಶೇ.40 ನವೀಕರಿಸಬಹುದಾದ ಇಂಧನ ಮೂಲಗಳಿಂದ 175 ಗೀಗಾವ್ಯಾಟ್ ವಿದ್ಯುತ್ ಭಾರತ ಉತ್ಪಾದಿಸುತ್ತಿದೆ. 2030ರ ವೇಳೆಗೆ 500 ಗೀಗಾವ್ಯಾಟ್ ಉತ್ಪಾದನೆ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

    ದೇಶದಲ್ಲಿ ಈ ಹಿಂದೆ ಎರಡು ಲಕ್ಷ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಆಗುತ್ತಿತ್ತು. ಈಗ ನಾಲ್ಕು ಲಕ್ಷ ಮೆಗಾವ್ಯಾಟ್ ಉತ್ಪಾದನೆಯಾಗುತ್ತಿದೆ. ಗ್ರಾಮೀಣ ಭಾಗದಲ್ಲಿಯೂ ವಿದ್ಯುತ್ ಪೂರೈಸಲಾಗುತ್ತಿದೆ. 8 ವರ್ಷಗಳಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಉತ್ತಮ ಸಾಧನೆಯಾಗಿದೆ ಎಂದರು.

    ಭಾರತದ 75ನೇ ಸ್ವಾತಂತ್ರೃ ಅಮೃತ ಮಹೋತ್ಸವ ನಿಮಿತ್ತ ಪ್ರತಿಯೊಬ್ಬ ನಾಗರಿಕ ಆಗಸ್ಟ್ 13ರಿಂದ ಆಗಸ್ಟ್ 15ರವರೆಗೆ ತಮ್ಮ ತಮ್ಮ ಮನೆ ಮೇಲೆ ತ್ರಿವರ್ಣ ಧ್ವಜವನ್ನು ಉತ್ಸಾಹದಿಂದ ಹಾರಿಸಿ ಹರ್ ಘರ್ ತಿರಂಗಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

    ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಮಾತನಾಡಿದರು. ಶಾಸಕ ರಹೀಮ್ ಖಾನ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಹಜ್ ಸಮಿತಿ ಅಧ್ಯಕ್ಷ ರೌೊದ್ದೀನ್ ಕಚೇರಿವಾಲೆ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಾಬು ವಾಲಿ, ಜಿಲ್ಲಾಧಿಕಾರಿ ಗೋವಿಂದರಡ್ಡಿ, ಎಸ್ಪಿ ಡೆಕ್ಕಾ ಕಿಶೋರಬಾಬು, ಜೆಸ್ಕಾಂ ಬೀದರ್ ವೃತ್ತದ ಅಧೀಕ್ಷಕ ಇಂಜಿನಿಯರ್ ಸಚಿನ್ ಜಿ.ಹುಂಡೇಕರ್ ಇತರರಿದ್ದರು.

    ವಿದ್ಯುತ್, ಆರೋಗ್ಯ, ಪೊಲೀಸ್ ಸೇರಿ ಕೆಲವು ಅವಶ್ಯಕ ಇಲಾಖೆಗಳಿದ್ದು, ಅವು ಸರಿಯಾಗಿ ಕೆಲಸ ನಿರ್ವಹಿಸದಿದ್ದರೆ ಜನರಿಗೆ ಬಹಳಷ್ಟು ತೊಂದರೆ ಆಗಲಿದೆ. ಕಳೆದ ಹತ್ತು ವರ್ಷಗಳಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಗಳಾಗಿವೆ. ಬರುವ ದಿನಗಳಲ್ಲಿ ಹೊಸ ತಂತ್ರಜ್ಞಾನ ಬಳಸಿ ಜನರಿಗೆ ಉತ್ತಮ ಸೇವೆ ನೀಡಬೇಕು.
    | ರಹೀಮ್ ಖಾನ್, ಶಾಸಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts