More

    ಆನಗೋಡಲ್ಲಿ ಪರಿಸರ ದಿನಾಚರಣೆ ಪ್ರಕೃತಿ ಸಂರಕ್ಷಣೆ ನಮ್ಮೆಲ್ಲರ ಹೊಣೆ

    ದಾವಣಗೆರೆ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಒಂದು ಮರವನ್ನು ಕಡಿಯುವ ಮುನ್ನ ನಾಲ್ಕು ಸಸಿಗಳನ್ನು ನೆಟ್ಟು ಬೆಳೆಸುವುದು ನಮ್ಮ ಕರ್ತವ್ಯವಾಗಬೇಕೆಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
    ತಾಲೂಕಿನ ಆನಗೋಡು ಗ್ರಾಮದಲ್ಲಿ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಅರಣ್ಯ ಇಲಾಖೆ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪರಿಸರ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.
    ನಾವು ಸುತ್ತಮುತ್ತಲಿನ ವಾತಾವರಣವೇ ಪರಿಸರ. ಇದು ಮಾನವನ ಸಾಮಾಜಿಕ, ಮಾನಸಿಕ, ದೈಹಿಕ ಬೆಳವಣಿಗೆಗಳ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಸ್ವಚ್ಛವಾಗಿರಿಸಿಕೊಳ್ಳುವುದು ನಮ್ಮ ಹೊಣೆ. ಆದರೆ ಅದು ನಮ್ಮಿಂದ ಸಾಧ್ಯವಾಗದೆ ಹೋಗುತ್ತಿರುವುದು ಒಂದು ಶೋಚನೀಯ ಸಂಗತಿ ಎಂದರು.
    ಇಂದಿನ ದಿನಗಳಲ್ಲಿ ವಾಯು, ಜಲ ಮತ್ತು ಶಬ್ದ ಮಾಲಿನ್ಯ ಹೆಚ್ಚಿದೆ. ಇವೆಲ್ಲವುಗಳಿಗೂ ಮುಖ್ಯ ಕಾರಣವೆಂದರೆ ಹೆಚ್ಚಾಗುತ್ತಿರುವ ಮಿತಿಮೀರಿದ ಜನಸಂಖ್ಯೆ ಕೂಡ ಪರಿಸರ ಮಾಲಿನ್ಯಕ್ಕೆ ಕಾರಣವಾಗಿದೆ ಎಂದರು.
    ಮಾನವನ ನಿತ್ಯ ಜೀವನ ಪದ್ಧತಿ ಹಾಗೂ ಹೆಚ್ಚುತ್ತಿರುವ ಕಾರ್ಖಾನೆಗಳು ಹೊರ ಬಿಡುವ ಕಸ ಹಾಗೂ ತ್ಯಾಜ್ಯ ನೀರಿನಿಂದಾಗಿ ವಾತಾವರಣ ಮಾಲಿನ್ಯಗೊಳ್ಳುತ್ತದೆ. ಹೀಗಾಗಿ ಪರಿಸರ ಮಾಲಿನ್ಯ ತಡೆಗಟ್ಟುವ ಜವಾಬ್ದಾರಿ ನಮ್ಮದಾಗಿದೆ. ಮುಂದಿನ ಪೀಳಿಗೆಗಾಗಿ ನಾವೆಲ್ಲರೂ ಪರಿಸರ ಸಂರಕ್ಷಣೆ ಮಾಡಬೇಕಾಗಿದೆ ಎಂದು ಕಿವಿಮಾತು ಹೇಳಿದರು.
    ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷ ಮಾದಪ್ಪ, ಸದಸ್ಯರಾದ ಕರಿಬಸಪ್ಪ, ಬಸವರಾಜಪ್ಪ, ಸಾಧಿಕ್, ಜಿಲ್ಲಾ ಅರಣ್ಯ ಇಲಾಖೆ ಅಧಿಕಾರಿ ಜಗನ್ನಾಥ್, ಆರ್ ಎಫ್ಒ ದೇವರಾಜ್, ಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts