More

    ಆನೆ ದಾಳಿಗೆ ಸಿಲುಕಿದ್ದ ಕಾರ್ಮಿಕ ಸಾವು

    ಮಡಿಕೇರಿ: ಪಾಲಿಬೆಟ್ಟದ ಬಳಿ ಆನೆ ದಾಳಿಗೆ ಸಿಲುಕಿದ್ದ ಕಾರ್ಮಿಕ ಬಾಬಿ (57) ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಮೃತಪಟ್ಟಿದ್ದಾರೆ.
    2 ದಿನಗಳ ಹಿಂದೆ ಪಾಲಿಬೆಟ್ಟ ಸಮೀಪದ ಮಸ್ಕಲ್ ಬಳಿಯ ಕಾಫಿ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಬಾಬಿ ಮೇಲೆ ಕಾಡಾನೆ ದಾಳಿ ಮಾಡಿತ್ತು. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
    ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಫೋನ್ ಮೂಲಕ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಕುಟುಂಬಸ್ಥರಿಗೆ ಕೂಡಲೇ ಪರಿಹಾರ ಕೊಡಬೇಕು ಮತ್ತು ಕಾಡಾನೆಯನ್ನು ತಕ್ಷಣ ಸೆರೆಹಿಡಿಯಬೇಕು ಎಂದು ಅರಣ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
    ಪೊನ್ನಣ್ಣ ನಿರ್ದೇಶನದ ಹಿನ್ನೆಲೆಯಲ್ಲಿ ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ ಆಸ್ಪತ್ರೆಗೆ ತೆರಳಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಸರ್ಕಾರದಿಂದ ಬರಬೇಕಿರುವ ಎಲ್ಲ ಪರಿಹಾರಗಳನ್ನು ತಲುಪಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು. ಈ ಮಧ್ಯೆ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮುಂದುವರಿದಿರುವ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts