More

    ಆನ್‌ಲೈನ್ ಪರೀಕ್ಷೆ ವಿರೋಧಿಸಿ ಪ್ರತಿಭಟನೆ

    ಹಾಸನ: ಐಟಿಐ ವಿದ್ಯಾರ್ಥಿಗಳಿಗೆ ಆನ್‌ಲೈನ್ ಪರೀಕ್ಷೆ ನಡೆಸಲು ಉದ್ದೇಶಿಸಿರುವ ಕೇಂದ್ರ ಸರ್ಕಾರ ತನ್ನ ನಿರ್ಧಾರ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ನೂರಾರು ವಿದ್ಯಾರ್ಥಿಗಳು ಶುಕ್ರವಾರ ಕರ್ನಾಟಕ ಪ್ರಜಾಶಕ್ತಿ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

    ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಈಚೆಗೆ ಮಂಡಿಸಿದ ಬಜೆಟ್‌ನಲ್ಲಿ ಆನ್‌ಲೈನ್ ಪರೀಕ್ಷೆ ನಡೆಸುವುದಾಗಿ ಘೋಷಿಸಿದ್ದಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇದರಿಂದ ತೊಂದರೆಯಾಗುತ್ತದೆ. ಇಂಟರ್‌ನೆಟ್, ಕಂಪ್ಯೂಟರ್ ಬಳಕೆ ಗೊತ್ತಿರದ ಮಕ್ಕಳು ತೊಂದರೆಗೆ ಸಿಲುಕುತ್ತಾರೆ ಎಂದರು.

    ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಮಾದರಿಯಲ್ಲಿ ಐಟಿಐ ಪರೀಕ್ಷೆ ನಡೆಯುತ್ತಿದೆ. ಪರೀಕ್ಷಾ ಭಯವಿಲ್ಲದೆ ಎದುರಿಸುತ್ತಿದ್ದೇವೆ. ಆದರೆ ಈಗ ಅದಕ್ಕೆ ಆನ್‌ಲೈನ್ ಸ್ಪರ್ಶ ಕಲ್ಪಿಸುತ್ತಿರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಕಷ್ಟಪಟ್ಟು ಅಧ್ಯಯನ ಮಾಡಿದ್ದರೂ ಉತ್ತರಿಸಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಆನ್‌ಲೈನ್ ಪರೀಕ್ಷೆಯಿಂದ ಅವ್ಯವಹಾರ ನಡೆಯುವ ಸಾಧ್ಯತೆಯಿದೆ. ಆದ್ದರಿಂದ ಮೊದಲಿನಂತೆ ಪರೀಕ್ಷೆ ನಡೆಸಬೇಕು. ಇಲ್ಲವಾದರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಮ್ ಅವರಿಗೆ ಮನವಿ ಸಲ್ಲಿಸಿದರು. ಕರ್ನಾಟಕ ಪ್ರಜಾಶಕ್ತಿ ಸಮಿತಿ ಜಿಲ್ಲಾಧ್ಯಕ್ಷ ಪ್ರವೀಣ್‌ಗೌಡ, ಕಾರ್ತಿಕ್, ರಘುಗೌಡ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts