More

    ಆಯುರ್ವೇದ ಭಾರತೀಯರ ಕೊಡುಗೆ

    ವಿಜಯಪುರ: ಆಯುರ್ವೇದ ವೈದ್ಯಶಾಸವು ಭಾರತೀಯರು ಮನುಕುಲಕ್ಕೆ ನೀಡಿದ ಬಹುದೊಡ್ಡ ಕೊಡುಗೆ. ಆಯುರ್ವೇದ ವೈದ್ಯರು ಅದನ್ನು ಜಾಗತಿಕವಾಗಿ ಪಸರಿಸಲು ಶ್ರಮಿಸಬೇಕೆಂದು ಜಿಲ್ಲಾ ಆಸ್ಪತ್ರೆಯ ಶಸ ಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ ಹೇಳಿದರು.

    ನಗರದ ಶ್ರೀ ಮಲ್ಲಿಕಾರ್ಜುನ ವಿದ್ಯಾವರ್ಧಕ ಸಂದ ಆರ್​ಕೆಎಂ ಆಯುರ್ವೇದ ಮಹಾವಿದ್ಯಾಲಯದಲ್ಲಿ ಶನಿವಾರ ನಡೆದ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಅವರು ಮಾತನಾಡಿದರು.

    ಸಂಸ್ಥೆ ಅಧ್ಯಕ್ಷ ವೈಜನಾಥ ಕರ್ಪೂರಮಠ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಿಸ್ತು ವಿದ್ಯಾರ್ಥಿ ಜೀವನದಲ್ಲಿ ಅತ್ಯವಶ್ಯಕ. ವಿದ್ಯಾರ್ಥಿಗಳು ಜವಾಬ್ದಾರಿಯಿಂದ ಅಧ್ಯಯನ ಮಾಡುವ ಮೂಲಕ ಪಾಲಕರು ನಿಮ್ಮ ಮೇಲಿಟ್ಟಿರುವ ವಿಶ್ವಾಸ, ಕನಸನ್ನು ನನಸಾಗಿಸಬೇಕು.

    ಉತ್ತಮ ವೈದ್ಯಕಿಯ ಕೌಶಲ್ಯ ಅಳವಡಿಸಿಕೊಂಡಾಗ ಆರೋಗ್ಯ ೇತ್ರದಲ್ಲಿ ಯಶಸ್ಸು ಗಳಿಸಬಹುದು ಎಂದರು.

    ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸಿ, ಪ್ರತಿಜ್ಞಾವಿಧಿ ಬೊಧಿಸಲಾಯಿತು. ಪರೀೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಗೌರವಿಸಲಾಯಿತು.

    ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಬೀಳ್ಕೊಡಲಾಯಿತು. ನಂತರ ವಿವಿಧ ಸಾಂಸತಿಕ ಕಾರ್ಯಕ್ರಮಗಳು ಜರುಗಿದವು.

    ಸಂಸ್ಥೆ ಪ್ರಧಾನ ಕಾರ್ಯದರ್ಶಿ ಶಂಭುಲಿಂಗಯ್ಯ ಕರ್ಪೂರಮಠ, ಆರ್​ಕೆಎಂ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ನಂದಕುಮಾರ ರುದ್ರಗೌಡರ, ಪಿಯು ಕಾಲೇಜಿನ ಪ್ರಾಚಾಯೆರ್ ಮೇಧಾ ಹಿರೇಮಠ, ಉಪನ್ಯಾಸಕರಾದ ಡಾ. ತೇಜಸ್ವಿನಿ ಜನಗೊಂಡ, ಡಾ. ಪ್ರಿಯಾಂಕಾ ಕಾರ್ಯಕ್ರಮ ನಿರೂಪಿಸಿದರು. ವಿಶ್ವಜಿತ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts