More

    ಆಯೋಗ ನಿಗದಿಪಡಿಸಿದ ದಾಖಲೆ ತೋರಿಸಿ ಮತದಾನ ಮಾಡಿ

    ಬಾಗಲಕೋಟೆ: ಸಾರ್ವತ್ರಿಕ ಲೋಕಸಭಾ ಚುನಾವಣೆ-೨೦೨೪ಕ್ಕೆ ೦೩-ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ಮೇ.೭ರಂದು ಬೆಳಿಗ್ಗೆ ೭ ರಿಂದ ಸಂಜೆ ೬ ಗಂಟೆಯವರೆಗೆ ಮತದಾನ ನಡೆಯಲಿದ್ದು, ಭಾರತ ಚುನಾವಣಾ ಆಯೋಗ ನಿಗದಿಪಡಿಸಿದ ೧೨ ದಾಖಲೆಗಳ ಪೈಕಿ ಭಾವಚಿತ್ರವಿರುವ ಯಾವುದಾದರೊಂದು ದಾಖಲೆ ಹಾಜರುಪಡಿಸಿ,ಮತದಾನ ಮಾಡುವಂತೆ ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಅವರು ತಿಳಿಸಿದ್ದಾರೆ.

    ಎಲ್ಲ ಮತಗಟ್ಟೆಗಳಲ್ಲಿ ಮತದಾರರನ್ನು ಗುರುತಿಸಲು ಮತದಾರ ಭಾವಚಿತ್ರವಿರುವ ಗುರುತಿನ ಚೀಟಿ ಲಭ್ಯವಿಲ್ಲದಿದ್ದ ಸಂದರ್ಭದಲ್ಲಿ ೧. ಆಧಾರ ಕಾರ್ಡ ೨.ನರೇಗಾ ಯೋಜನೆಯಡಿಯಲ್ಲಿ ನೀಡಿರುವ ಭಾವಚಿತ್ರವಿರುವ ಉದ್ಯೋಗ ಕಾರ್ಡ್ ೩. ಸಾರ್ವಜನಿಕ ವಲಯದ ಬ್ಯಾಂಕ್/ಅಂಚೆ ಕಚೇರಿ ನೀಡಿರುವ ಭಾವಚಿತ್ರವಿರುವ ಪಾಸ್ ಪುಸ್ತಕ ೪. ಭಾವಚಿತ್ರವಿರುವ ಆರೋಗ್ಯ ವಿಮಾ ಯೋಜನೆ ಸ್ಮಾರ್ಟ್ ಕಾರ್ಡ್ (ಕಾರ್ಮಿಕ ಮಂತ್ರಾಲಯ ಯೋಜನೆ), ೫.ಡ್ರೈವಿಂಗ್ ಲೈಸನ್ಸ್ ೬.ಆದಾಯ ತೆರಿಗೆ ಗುರುತಿನ ಚೀಟಿ ೭.ಎನ್.ಪಿಆರ್ ಅಡಿಯಲ್ಲಿ ಆರ್‌ಜಿಐ ಸ್ಮಾರ್ಟ್ ಕಾರ್ಡ್, ೮.ಪಾಸ್ ಪೋರ್ಟ್, ೯.ಭಾವಚಿತ್ರವಿರುವ ಪಿಂಚಣಿ ದಾಖಲೆ, ೧೦.ರಾಜ್ಯ/ಕೇಂದ್ರ ಸರ್ಕಾರ ಹಾಗೂ ಸಾರ್ವಜನಿಕ ಉದ್ದಿಮೆಗಳು ಅಥವಾ ಇತರೆ ಖಾಸಗಿ ಔದ್ಯಮಿಕ ಸಂಸ್ಥೆಗಳು ಅವರ ಕೆಲಸಗಾರರಿಗೆ ನೀಡಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿ, ೧೧.ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರುಗಳಿಗೆ ನೀಡಲಾದ ಅಧಿಕೃತ ಗುರುತಿನ ಚೀಟಿ ಮತ್ತು ೧೨. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ, ಭಾರತ ಸರ್ಕಾರ ಇಲಾಖೆಯಿಂದ ನೀಡಿರುವ ಅನನ್ಯ ಅಂಗವಿಕಲ ಗುರುತಿನ ಚೀಟಿ ಪರಿಶೀಲನೆಗಾಗಿ ಹಾಜರುಪಡಿಸಿ ಮತದಾನ ಮಾಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts