More

    ಆರುಷಿ ಯೋಜನೆ, ಕೇಂದ್ರದ ಗಮನ ಸೆಳೆಯಲು ಒತ್ತಾಯ

    ದಾವಣಗೆರೆ: ಲೋಕಸಭೆಯಲ್ಲಿ ಜನನ ಮತ್ತು ಮರಣಗಳ ನೋಂದಣಿ ಕಾಯ್ದೆ 1969ಕ್ಕೆ ತಿದ್ದುಪಡಿ ತರುವ ಉದ್ದೇಶದ ಮಸೂದೆ ಮಂಡನೆ ಸಂದರ್ಭದಲ್ಲಿ ರಾಜ್ಯದ ಹೆಸರನ್ನು ಉಲ್ಲೇಖಿಸಿಲ್ಲ. ಈ ಬಗ್ಗೆ ಸಂಸದರು ಕೇಂದ್ರ ಸರ್ಕಾರದ ಗಮನ ಸೆಳೆಯಬೇಕು ಎಂದು ಆರುಷಿ ಯೋಜನೆ ರೂವಾರಿ ಸಿ.ಎಂ. ಜಕ್ಕಾಳಿ ಹೇಳಿದರು.
    ಮಸೂದೆ ವಿಷಯಕ್ಕೆ ಸಂಬಂಧಿಸಿದಂತೆ ಹೆಣ್ಣು ಭ್ರೂಣ ಹತ್ಯೆ ನಿಯಂತ್ರಣ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಜನನ ಪ್ರಮಾಣಪತ್ರ ನೀಡುವ ಆರುಷಿ ಯೋಜನೆ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದ್ದರೂ ಕೇಂದ್ರ ಸರ್ಕಾರ ರಾಜ್ಯದ ಹೆಸರನ್ನು ಉಲ್ಲೇಖಿಸಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.
    ಆರುಷಿ ಯೋಜನೆ ವರದಿಯನ್ನು ಕಳೆದ 9 ವರ್ಷಗಳ ಅವಧಿಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಸಲ್ಲಿಸಲಾಗಿದೆ. ಜಿಲ್ಲೆಯ ಸಂಸದರು ರಾಜ್ಯದ ಎಲ್ಲ ಸಂಸದರು ಹಾಗೂ ಕೇಂದ್ರ ಸಚಿವರನ್ನು ಸಂಪರ್ಕಿಸಿ ಕೇಂದ್ರ ಸರ್ಕಾರದ ಗಮನಕ್ಕೆ ತಂದು ಯೋಜನೆಗೆ ಸಂಬಂಧಿಸಿದಂತೆ ರಾಜ್ಯಕ್ಕೆ ಸಲ್ಲಬೇಕಾದ ಗೌರವ ತಂದುಕೊಡಬೇಕು ಎಂದು ಒತ್ತಾಯಿಸಿದರು.
    ಸಾಮಾಜಿಕ ಕಾರ್ಯಕರ್ತ ಎಂ. ಮಂಜುನಾಥ್ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts