More

    ಆರೈಕೆ ಕೇಂದ್ರಕ್ಕೆ ದಾಖಲಿಸಲು ಮುಂದಾಗಿ

    ಕಟಕೋಳ: ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಕರೊನಾ ಸೋಂಕಿತರಿಗೆ ಉತ್ತಮ ಚಿಕಿತ್ಸೆ ಹಾಗೂ ಅಗತ್ಯ ಸೌಲಭ್ಯ ಒದಗಿಸಲಾಗುತ್ತಿದೆ. ಇಲ್ಲಿ ದಾಖಲಾಗುವವರು ಆತಂಕ ಪಡಬೇಕಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು.

    ಸ್ಥಳೀಯ ಗ್ರಾಪಂ ಸದಸ್ಯರೊಂದಿಗೆ ಬುಧವಾರ ಸಂವಾದ ನಡೆಸಿದ ಅವರು, ಗ್ರಾಮಗಳಲ್ಲಿ ಸೋಂಕು ಹರಡುವಿಕೆ ನಿಯಂತ್ರಣಕ್ಕಾಗಿ ಸೋಂಕಿತರನ್ನು ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಿಸಲು ಕ್ರಮ ಕೈಗೊಳ್ಳಬೇಕು. ಜನರು ವೈರಸ್ ಬಗ್ಗೆ ನಿರ್ಲಕ್ಷೃ ವಹಿಸಬಾರದು. ಸಾಮುದಾಯಿಕ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಅಗತ್ಯ ಸುರಕ್ಷತಾ ಕ್ರಮ ಅನುಸರಿಸಬೇಕು ಎಂದು ಸಲಹೆ ನೀಡಿದರು. ಹೋಂ ಕ್ವಾರಂಟೈನ್‌ನಲ್ಲಿರುವ ಸೋಂಕಿತರ ಮನೆಗೆ ಸ್ವತಃ ತೆರಳಿ, ಆರೋಗ್ಯ ವಿಚಾರಿಸಿದರು. ಹೋಂ ಕ್ವಾರಂಟೈನ್‌ನಲ್ಲಿ ಇರುವುದರಿಂದ ಆಗುವ ತೊಂದರೆಗಳ ಕುರಿತು ಮನದಟ್ಟು ಮಾಡಿದ ಹಿರೇಮಠ ಅವರು, ಸೋಂಕಿತರನ್ನು ಆರೈಕೆ ಕೇಂದ್ರಕ್ಕೆ ಕಳುಹಿಸುವಲ್ಲಿ ಯಶಸ್ವಿಯಾದರು. ಶಾಸಕ ಮಹಾದೇವಪ್ಪ ಯಾದವಾಡ ಮಾತನಾಡಿ, ಕರೊನಾದಿಂದ ಭಯಭೀತರಾಗಿ ಮನೆಯಲ್ಲಿದ್ದರೆ ಅಪಾಯ ಖಚಿತ. ಅಲ್ಲದೆ, ಕುಟುಂಬದ ಇತರ ಸದಸ್ಯರಿಗೂ ಸೋಂಕು ತಗುಲುವ ಸಾಧ್ಯತೆ ಇರುತ್ತದೆ. ಹೀಗಾಗಿ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಾಗಬೇಕು ಎಂದು ಹೇಳಿದರು. ಜಿಪಂ ಸದಸ್ಯ ಮಾರುತಿ ತುಪ್ಪದ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಎಸ್.ಡವಣ, ಪಿಕೆಪಿಎಸ್ ಅಧ್ಯಕ್ಷ ಮಹಾದೇವ ಅತಾರ, ಬೈಲಹೊಂಗಲ ಉಪವಿಭಾಗಾಧಿಕಾರಿ ಶಶಿಧರ ಬಗಲಿ, ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ, ವೈದ್ಯಾಧಿಕಾರಿ ಡಾ.ಮಲ್ಲು ಶಾಲದಾರ, ತಾಪಂ ಇಒ ಮುರಳೀಧರ ದೇಶಪಾಂಡೆ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts