More

    ಆರೋಗ್ಯ ಇಲಾಖೆ ಸಿಬ್ಬಂದಿಗೆ ಸ್ಯಾನಿಟೈಸರ್ ವಿತರಣೆ

    ಲಕ್ಷ್ಮೇಶ್ವರ: ಕರೋನಾ ವೈರಸ್ ಹರಡದಂತೆ ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ, ಪುರಸಭೆ ಸಿಬ್ಬಂದಿ, ಪೊಲೀಸ್, ಕಂದಾಯ ಇಲಾಖೆ ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದು, ಅವರಿಗೆ ಹ್ಯಾಂಡ್ ಸ್ಯಾನಿಟೈಸರ್​ಗಳನ್ನು ನೀಡುವ ಮೂಲಕ ಅಳಿಲು ಸೇವೆ ಸಲ್ಲಿಸಲಾಗುತ್ತಿದೆ ಎಂದು ಕಲಕೇರಿ ಮೃಡಗಿರಿ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ ಹೇಳಿದರು.

    ಪಟ್ಟಣದ ಪುರಸಭೆ ಆವರಣದಲ್ಲಿ ಆರೋಗ್ಯ, ಕಂದಾಯ, ಪೊಲೀಸ್ ಹಾಗೂ ಪುರಸಭೆ ಸಿಬ್ಬಂದಿಗೆ ಉಚಿತವಾಗಿ ಸುಮಾರು 150 ಕ್ಕೂ ಹೆಚ್ಚು ಲೀಟರ್ ಹ್ಯಾಂಡ್ ಸ್ಯಾನಿಟೈಸರ್ ಕೊಡುಗೆಯಾಗಿ ನೀಡಿ ಮಾತನಾಡಿದರು. ಧಾರವಾಡ, ಹುಬ್ಬಳ್ಳಿ, ಕುಂದಗೋಳ, ಲಕ್ಷ್ಮೇಶ್ವರ, ಮುಂಡರಗಿ, ಶಿರಹಟ್ಟಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಲಾಖೆಗಳಿಗೆ ಈ ಸ್ಯಾನಿಟೈಸರ್ ಕೊಡುಗೆಯಾಗಿ ನೀಡುವ ಉದ್ದೇಶ ಹೊಂದಿದ್ದು, ಕರೊನಾ ವೈರಸ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದರು. ತಹಸೀಲ್ದಾರ್ ಭ್ರಮಾರಂಬ ಗುಬ್ಬಿಶೆಟ್ಟಿ, ಮಾಜಿ ಶಾಸಕಾರದ ಜಿ.ಎಸ್. ಗಡ್ಡದೇವರಮಠ, ರಾಮಕೃಷ್ಣ ದೊಡ್ಡಮನಿ, ಡಾ.ಗಿರೀಶ ಮರಡ್ಡಿ, ಎಂ.ಎಸ್. ದೊಡ್ಡಗೌಡ್ರ, ಶಿವಪ್ರಕಾಶ ಮಹಾಜನಶೆಟ್ಟರ್, ಎಸ್.ಪಿ. ಬಳಿಗಾರ, ಟಿ.ಈಶ್ವರ, ಚನ್ನಪ್ಪ ಜಗಲಿ, ರಾಜಣ್ಣ ಕುಂಬಿ, ಬಸವರಾಜ ಓದುನವರ, ವಿಜಯ ಕರಡಿ, ವಿರೂಪಾಕ್ಷಿ ನಂದೆಣ್ಣವರ, ಪಿಎಸ್​ಐ ಶಿವಯೋಗಿ ಆಲೂರ, ಮಂಜುನಾಥ ಮುದಗಲ್, ಆನಂದ ಬದಿ, ಬಸವಣ್ಣೆಪ್ಪ ನಂದೆಣ್ಣವರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts