More

    ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಿ

    ಯಳಂದೂರು: ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು ತಮ್ಮ ಆರೋಗ್ಯ ಮತ್ತು ಸ್ವಚ್ಛತೆ ಕಡೆ ಹೆಚ್ಚಿನ ಗಮನ ಹರಿಸಬೇಕೆಂದು ಗ್ರಾಮ ಪಂಚಾಯಿತಿ ಆರೋಗ್ಯ ಅಮೃತ ಅಭಿಯಾನ(ಜಿಪಿಎಎಎ)ದ ತಾಲೂಕು ಸಂಯೋಜಕ ಸಿದ್ದರಾಜು ಕರೆ ನೀಡಿದರು.

    ತಾಲೂಕಿನ ದುಗ್ಗಹಟ್ಟಿ ಗ್ರಾಮದಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಮೆಲ್ಲಹಳ್ಳಿ ಕೆರೆ ಅಭಿವೃದ್ಧಿ ಕಾಮಗಾರಿಯ ಹತ್ತಿರ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮದಡಿ ಇತ್ತೀಚೆಗೆ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿ, ಗ್ರಾಮೀಣ ಪ್ರದೇಶದ ಜನರು ಶುಚಿತ್ವ ಮತ್ತು ಆರೋಗ್ಯದ ಕಡೆಗೆ ತಪಾಸಣೆ ಮಾಡಿಸಿಕೊಂಡು ಆರೋಗ್ಯ ಜೀವನವನ್ನು ನಡೆಸಬೇಕೆಂದು ಮನವಿ ಮಾಡಿದರು.

    ಶಿಬಿರದಲ್ಲಿ 99 ಜನರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು. 9 ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಿಫಾರಸು ಮಾಡಲಾಯಿತು. ಸಮುದಾಯ ಆರೋಗ್ಯ ಅಧಿಕಾರಿ ಅರ್ಪಿತಾ, ಅಂಗನವಾಡಿ ಕಾರ್ಯಕರ್ತೆ ಶೋಭಾ, ಆಶಾ ಕಾರ್ಯಕರ್ತೆ ನಾಗರತ್ನ, ಗ್ರಾಮ ಕಾಯಕಮಿತ್ರ ಗೀತಾ ಹಾಗೂ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts