More

    ಆರೋಗ್ಯ, ನೇತ್ರ ತಪಾಸಣಾ ಶಿಬಿರ

    ನಾಗಮಂಗಲ: ಮುಂಬರುವ 2023ರ ಚುನಾವಣೆಯಲ್ಲಿ ಸ್ಪರ್ಧಿಸಲು ಎರಡು ಪಕ್ಷಗಳ ಜತೆ ಮಾತುಕತೆ ನಡೆಸಿದ್ದೇನೆ. ಎರಡೂ ಪಕ್ಷಗಳಿಂದ ಟಿಕೆಟ್ ಸಿಗದಿದ್ದರೆ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಸಮಾಜಸೇವಕ ಫೈಟರ್‌ರವಿ ಹೇಳಿದರು.
    ತಾಲೂಕಿನ ಬಿಂಡಿಗನವಿಲೆ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಭಾನುವಾರ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರ, ಬೆಂಗಳೂರಿನ ಒಕ್ಕಲಿಗರ ಸಂಘದ ಉಚಿತ ಸಂಚಾರಿ ದಂತ ಚಿಕಿತ್ಸಾಲಯ ಹಾಗೂ ಮೈಸೂರಿನ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಸಹಭಾಗಿತ್ವದಲ್ಲಿ ಸಮಾಜ ಸೇವಕ ಫೈಟರ್‌ರವಿ ಆಯೋಜಿಸಿದ್ದ ಬೃಹತ್ ಉಚಿತ ಆರೋಗ್ಯ, ನೇತ್ರ ತಪಾಸಣಾ ಮತ್ತು ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
    ನಾಗಮಂಗಲ ಕ್ಷೇತ್ರದಿಂದ ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ನನ್ನ ಬಗ್ಗೆ ಯಾರೂ ಏನೆಲ್ಲ ಅಪಪ್ರಚಾರ ಮಾಡಿದರೂ ನನಗೆ ಜನರ ಬೆಂಬಲ ಸಿಗುತ್ತಿದ್ದು ಜನರೇ ಮುಂದಿನ ದಿನಗಳಲ್ಲಿ ಉತ್ತರ ನೀಡಲಿದ್ದಾರೆ. ಜನತಾ ನ್ಯಾಯಾಲಯದಲ್ಲಿ ಮುಂದಿನ ತೀರ್ಪು ನಿರ್ಧಾರವಾಗಲಿದೆ. ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಜನರ ಸೇವೆ ಮಾಡುತ್ತಿದ್ದೇನೆ. ಆರೋಗ್ಯ ಮತ್ತು ಶುದ್ಧ ಕುಡಿಯುವ ನೀರನ್ನು ತಾಲೂಕಿನ ಜನರಿಗೆ ನೀಡುವುದು ನನ್ನ ಮುಖ್ಯ ಉದ್ದೇಶವಾಗಿದೆ. ಮುಂದಿನ ದಿನಗಳಲ್ಲಿ ಯಾವ ಪಕ್ಷಗಳ ಜತೆ ಮಾತುಕತೆ ನಡೆಸಿದ್ದೇನೆ ಎಂಬುದನ್ನು ತಿಳಿಸಲಿದ್ದೇನೆ ಎಂದರು.
    ಸಮಾಜಮುಖಿ ಕಾರ್ಯ ಶ್ಲಾಘನೀಯ:ಸಮಾರಂಭದ ಸಾನ್ನಿಧ್ಯವಹಿಸಿ ಮಾತನಾಡಿದ ಆದಿಚುಂಚನಗಿರಿ ಮಠದ ಸತ್ಕೀರ್ತಿನಾಥಸ್ವಾಮೀಜಿ, ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಸುರಕ್ಷತೆ ದೃಷ್ಟಿಯಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸುವ ಜತೆಗೆ ಇಂತಹ ಶಿಬಿರಗಳನ್ನು ಆಯೋಜಿಸಿರುವ ಸಮಾಜ ಸೇವಕ ಫೈಟರ್ ರವಿ ಅವರ ಸಮಾಜಮುಖಿ ಕಾರ್ಯ ನಿಜಕ್ಕೂ ಶ್ಲಾಘನೀಯ. ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರತಿನಿತ್ಯ ಸಹಸ್ರಾರು ಜನರಿಗೆ ಆರೋಗ್ಯ ಸೇವೆ ನೀಡಲಾಗುತ್ತಿದ್ದು, ಈ ಶಿಬಿರದಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡಿರುವ ಜನರಿಗೆ ಹೆಚ್ಚಿನ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆಯ ಅಗತ್ಯವಿದ್ದಲ್ಲಿ ಸಮಾಜ ಸೇವಕ ಫೈಟರ್ ರವಿ ಮತ್ತು ಆದಿಚುಂಚನಗಿರಿ ಆಸ್ಪತ್ರೆಯ ಸಹಯೋಗದಲ್ಲಿ ಎಲ್ಲ ಬಗೆಯ ಔಷಧೋಪಚಾರವನ್ನು ಉಚಿತವಾಗಿ ನೀಡಲಾಗುವುದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts