More

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಹೊರಗುತ್ತಿಗೆ ನೌಕರರ ಮೌನ ಪ್ರತಿಭಟನೆ

    ಚಿಕ್ಕಬಳ್ಳಾಪುರ: ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದರೂ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಸ್ಪಂದಿಸದಿರುವುದನ್ನು ವಿರೋಧಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಹೊರಗುತ್ತಿಗೆ ನೌಕರ ಸಂಘದ ಕಾರ್ಯಕರ್ತರು ಸೋಮವಾರ ಜಿಲ್ಲಾಸ್ಪತ್ರೆಯ ಎದುರು ಪ್ರತಿಭಟನೆ ನಡೆಸಿದರು.

    ಭಿತ್ತಿಪತ್ರ ಹಿಡಿದುಕೊಂಡು ಮೌನವಾಗಿ ಪ್ರತಿಭಟಿಸಿದ ಕಾರ್ಯಕರ್ತರು ಸರ್ಕಾರದ ನಿರ್ಲಕ್ಷ್ಯಕ್ಕೆ ಕಿಡಿಕಾರಿದರು. ಕೆಲಸದಿಂದ ದೂರ ಉಳಿಯುವ ಎಚ್ಚರಿಕೆ ನೀಡಿದರು.

    ಕರೊನಾ ಸೋಂಕಿನ ನಡುವೆ ಕಾರ್ಯ ನಿರ್ವಹಿಸುತ್ತಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಿಬ್ಬಂದಿಯನ್ನು ಕರೊನಾ ಸೇನಾನಿಗಳನ್ನಾಗಿ ಗುರುತಿಸಲಾಗಿದೆ. ಚಪ್ಪಾಳೆ ತಟ್ಟಿ, ಸನ್ಮಾನಿಸಲಾಗಿದೆ. ಆದರೆ, ಕೆಲಸಕ್ಕೆ ಅನುಗುಣವಾಗಿ ವೇತನ, ಹುದ್ದೆ ಕಾಯಂ, ವಿಶೇಷ ಭತ್ಯೆ ಸೇರಿ 14 ಬೇಡಿಕೆಗಳನ್ನು ಈಡೇರಿಸದೆ ವಂಚಿಸಲಾಗುತ್ತಿದೆ ಎಂದು ಪ್ರತಿಭಟನಾನಿರತರು ಆರೋಪಿಸಿದರು.

    ಸಮಸ್ಯೆ ಪರಿಹಾರಕ್ಕಾಗಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುತ್ತಿದ್ದರೂ ಸರ್ಕಾರ ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ಕರ್ತವ್ಯದಿಂದ ದೂರ ಉಳಿಯಲು ನಿರ್ಧರಿಸಲಾಗಿದ್ದು ನಿರ್ಲಕ್ಷ್ಯ ಮುಂದುವರೆಸಿದಲ್ಲಿ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ನೀಡಿದರು.

    ಸಂಘದ ಜಿಲ್ಲಾಧ್ಯಕ್ಷ ಚೌಡರೆಡ್ಡಿ, ಶ್ರೀನಿವಾಸ್, ಮಂಜುನಾಥ್ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts