More

    ಆರೋಗ್ಯ, ಶಿಕ್ಷಣವನ್ನು ಉಚಿತವಾಗಿ ನೀಡಿ

    ಮೈಸೂರು: ಎಲ್ಲ ವರ್ಗದವರಿಗೂ ಅನುಕೂಲವಾಗುವಂತೆ ಸರ್ಕಾರ ಉಚಿತ ಚಿಕಿತ್ಸೆ, ಔಷಧ ಹಾಗೂ ಉನ್ನತ ಮಟ್ಟದ ವರೆವಿಗೂ ಉಚಿತ ಶಿಕ್ಷಣ ನೀಡುವ ಮೂಲಕ ದೇಶದ ಸಂಪತ್ತು ಎಲ್ಲರಿಗೂ ಸಮಾನವಾಗಿ ದೊರೆಯುವಂತೆ ಮಾಡಬೇಕು ಎಂದು ಮಡಿಕೇರಿ ಬಲ್ಲಮಾವಟಿ ನೇತಾಜಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿದ್ದ ಕೆ.ಸೋಮಶೇಖರ್ ಸರ್ಕಾರವನ್ನು ಕೋರಿದರು.
    ಬೇರೆ ಉಚಿತ ಯೋಜನೆಗಳಿಗಿಂತ ಆರೋಗ್ಯ ಮತ್ತು ಶಿಕ್ಷಣವನ್ನು ಉಚಿತ ನೀಡಬೇಕು. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯನ್ನು ಪ್ರತಿ ಡಿಸೆಂಬರ್ ಒಳಗೆ ಪೂರ್ಣಗೊಳಿಸಬೇಕು, ಶೈಕ್ಷಣಿಕ ವೇಳಾಪಟ್ಟಿಯನ್ನು ಮಂಚಿತವಾಗಿ ಪ್ರಕಟಿಸುವ ಮೂಲಕ ಅನುಕೂಲ ಮಾಡಿಕೊಡಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.
    ಪೊಲೀಸ್, ಸೆಸ್ಕ್, ಸೇರಿದಂತೆ ಇತರ ತಾಂತ್ರಿಕ ಇಲಾಖೆಗಳಿಗೆ ಮೊದಲೇ ದೈಹಿಕ ಸಾಮರ್ಥ್ಯ ಸಂದರ್ಶನ ಮಾಡಿ ನಂತರ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇರ ನೇಮಕಾತಿ, ಬಿಪಿಎಲ್, ಎಪಿಎಲ್ ರೇಷನ್ ಕಾರ್ಡ್ ಅರ್ಹರಿಗೆ ವರ್ಷದ ಎಲ್ಲ ಸಮಯದಲ್ಲಿಯೂ ಪಡಿತರ ಕಲ್ಪಿಸಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts