More

    ಆರ್ಥಿಕವಾಗಿ ಸ್ವಾವಲಂಬಿಗಳಾಗಲಿ

    ಶನಿವಾರಸಂತೆ: ವ್ಯವಹಾರ ಚತುರತೆ ರೂಢಿಸಿಕೊಳ್ಳುವುದರೊಂದಿಗೆ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಗ್ರಾ.ಪಂ.ಅಧ್ಯಕ್ಷೆ ಫರ್ಜಾನ್ ಶಾಹಿದ್ ಹೇಳಿದರು.

    ಜಿ.ಪಂ. ಸಂಜೀವಿನಿ ಯೋಜನೆ ಮತ್ತು ಶನಿವಾರಸಂತೆ ಗ್ರಾಪಂ ಸಂಯುಕ್ತ ಆಶ್ರಯದಲ್ಲಿ ಶನಿವಾರಸಂತೆ ಮಾರುಕಟ್ಟೆಯಲ್ಲಿ ಶನಿವಾರ ಆಯೋಜಿಸಿದ್ದ ಗ್ರಾಪಂ ಮಟ್ಟದ ಸಂಜೀವಿನಿ ಒಕ್ಕೂಟದ ಸಂತೆಮೇಳ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಸ್ವಾವಲಂಬಿಯಾದರೆ ಇಡೀ ಕುಟುಂಬ ಸ್ವಾವಲಂಬಿ ಆದಂತೆ. ಹಾಗಾಗಿ ಯೋಜನೆಯನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.

    ಸಂಜೀವಿನಿ ಯೋಜನೆಯ ಜಿಲ್ಲಾ ವ್ಯವಸ್ಥಾಪಕ ಪಿ.ಎಸ್.ಜಗನ್ನಾಥ್ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿ, ಸಂಜೀವಿನಿ ಸ್ವಸಹಾಯ ಸಂಘದ ಸದಸ್ಯೆಯರು ತಮ್ಮ ಮನೆಗಳಲ್ಲಿ ಬೆಳೆದ ತರಕಾರಿ, ಹಣ್ಣು ಸೇರಿದಂತೆ ವಿವಿಧ ರೀತಿಯ ಆಹಾರ ಪದಾರ್ಥ, ಮನೆಯಲ್ಲಿ ತಯಾರಿಸಿದ ಅಲಂಕಾರಿಕ ಸಾಮಗ್ರಿ, ಸಿದ್ಧ ಉಡುಪು ಇತ್ಯಾದಿಗಳಿಗೆ ಮಾರುಕಟ್ಟೆ ಯ ವ್ಯವಸ್ಥೆ ಮಾಡಿಕೊಡಲಾಗುವುದು.
    ಪ್ರತಿ ಗ್ರಾಪಂ, ತಾಲೂಕು ಮಟ್ಟದಲ್ಲಿ ಸಂಜೀವಿನಿ ಒಕ್ಕೂಟದ ಸಂತೆ ಮೇಳ ನಡೆಸಲು ಅವಕಾಶ ಮಾಡಿಕೊಡಲಾಗುತ್ತದೆ. ಈ ಸಂತೆಯ ಉತ್ಪನ್ನಗಳಿಗೆ ಬೇಡಿಕೆ ಇದ್ದು, ಮಹಿಳೆಯರು ಹೆಚ್ಚಾಗಿ ಪಾಲ್ಗೊಳ್ಳಬೇಕು ಎಂದರು.

    ಸಂಜೀವಿನಿ ಯೋಜನೆಯ ಸೋಮವಾರಪೇಟೆ ವಲಯ ಮೇಲ್ವೀಚಾರಕಿ ಬಿ.ಆರ್.ಭವ್ಯಾ ಮಾತನಾಡಿದರು. ಸಂಜೀವಿನಿ ತಾಲೂಕು ಒಕ್ಕೂಟದ ಅಧ್ಯಕ್ಷೆ ಜಾನಕಿ, ಶನಿವಾರಸಂತೆ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಎಂ.ಕೆ.ಚಂದ್ರಕಲಾ, ಆರ್‌ಎಸ್‌ಇಟಿಐ ಸಂಸ್ಥೆಯ ಸಿ.ಇ.ಹರೀಶ್, ಶನಿವಾರಸಂತೆ ಗ್ರಾ.ಪಂ.ಕಾರ್ಯದರ್ಶಿ ದೇವರಾಜ್ ಇತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts